‘ಕಾಟೇರ’ ಸಿನಿಮಾ ನೋಡಿ ಮೇಘಾ ಶೆಟ್ಟಿ ಫುಲ್ ಖುಷ್; ಒಂದೇ ಮಾತಲ್ಲಿ ವಿಮರ್ಶೆ ತಿಳಿಸಿದ ನಟಿ
ಬಾಕ್ಸ್ ಆಫೀಸ್ನಲ್ಲಿ ‘ಕಾಟೇರ’ ಅಬ್ಬರಿಸುತ್ತಿದೆ. ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಲೆಕ್ಷನ್ ಆಗಲಿದೆ. ಬುಧವಾರ (ಜ.3) ಬೆಂಗಳೂರಿನಲ್ಲಿ ಸೆಲೆಬ್ರಿಟಿ ಶೋ ಆಯೋಜಿಸಲಾಗಿತ್ತು. ನಿಶ್ವಿಕಾ ನಾಯ್ಡು, ಆಶಾ ಭಟ್, ಮೇಘಾ ಶೆಟ್ಟಿ, ರಮೇಶ್ ಅರವಿಂದ್, ಅಭಿಷೇಕ್ ಅಂಬರೀಷ್ ಸೇರಿದಂತೆ ಅನೇಕ ನಟ-ನಟಿಯರು ‘ಕಾಟೇರ’ ನೋಡಿ ಮೆಚ್ಚಿಕೊಂಡಿದ್ದಾರೆ.
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ನೋಡಿ ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಖ್ಯಾತ ನಟಿ ಮೇಘಾ ಶೆಟ್ಟಿ (Megha Shetty) ಕೂಡ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಇದು 2024ರ ಅತ್ಯುತ್ತಮ ಸಿನಿಮಾ’ ಎಂದು ಒಂದೇ ಮಾತಿನಲ್ಲಿ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ‘ಕಾಟೇರ’ ಸಿನಿಮಾ (Kaatera Movie) ಅಬ್ಬರಿಸುತ್ತಿದೆ. ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಲೆಕ್ಷನ್ ಆಗಲಿದೆ. ಬುಧವಾರ (ಜ.3) ಬೆಂಗಳೂರಿನಲ್ಲಿ ಸೆಲೆಬ್ರಿಟಿ ಶೋ ಆಯೋಜಿಸಲಾಗಿತ್ತು. ನಿಶ್ವಿಕಾ ನಾಯ್ಡು, ಆಶಾ ಭಟ್, ಮೇಘಾ ಶೆಟ್ಟಿ, ರಮೇಶ್ ಅರವಿಂದ್, ಅಭಿಷೇಕ್ ಅಂಬರೀಷ್ ಸೇರಿದಂತೆ ಅನೇಕ ನಟ-ನಟಿಯರು ‘ಕಾಟೇರ’ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾಗೆ ರಾಕ್ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದು, ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

