‘ಕಾಟೇರ’ ಸಿನಿಮಾ ನೋಡಿ ಮೇಘಾ ಶೆಟ್ಟಿ ಫುಲ್​ ಖುಷ್​; ಒಂದೇ ಮಾತಲ್ಲಿ ವಿಮರ್ಶೆ ತಿಳಿಸಿದ ನಟಿ

Updated on: Jan 04, 2024 | 12:52 PM

ಬಾಕ್ಸ್​ ಆಫೀಸ್​ನಲ್ಲಿ ‘ಕಾಟೇರ’ ಅಬ್ಬರಿಸುತ್ತಿದೆ. ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಲೆಕ್ಷನ್​ ಆಗಲಿದೆ. ಬುಧವಾರ (ಜ.3) ಬೆಂಗಳೂರಿನಲ್ಲಿ ಸೆಲೆಬ್ರಿಟಿ ಶೋ ಆಯೋಜಿಸಲಾಗಿತ್ತು. ನಿಶ್ವಿಕಾ ನಾಯ್ಡು, ಆಶಾ ಭಟ್​, ಮೇಘಾ ಶೆಟ್ಟಿ, ರಮೇಶ್​ ಅರವಿಂದ್​, ಅಭಿಷೇಕ್ ಅಂಬರೀಷ್​ ಸೇರಿದಂತೆ ಅನೇಕ ನಟ-ನಟಿಯರು ‘ಕಾಟೇರ’ ನೋಡಿ ಮೆಚ್ಚಿಕೊಂಡಿದ್ದಾರೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್ (Darshan)​ ನಟನೆಯ ‘ಕಾಟೇರ’ ಸಿನಿಮಾ ನೋಡಿ ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಖ್ಯಾತ ನಟಿ ಮೇಘಾ ಶೆಟ್ಟಿ (Megha Shetty) ಕೂಡ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಇದು 2024ರ ಅತ್ಯುತ್ತಮ ಸಿನಿಮಾ’ ಎಂದು ಒಂದೇ ಮಾತಿನಲ್ಲಿ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘ಕಾಟೇರ’ ಸಿನಿಮಾ (Kaatera Movie) ಅಬ್ಬರಿಸುತ್ತಿದೆ. ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಲೆಕ್ಷನ್​ ಆಗಲಿದೆ. ಬುಧವಾರ (ಜ.3) ಬೆಂಗಳೂರಿನಲ್ಲಿ ಸೆಲೆಬ್ರಿಟಿ ಶೋ ಆಯೋಜಿಸಲಾಗಿತ್ತು. ನಿಶ್ವಿಕಾ ನಾಯ್ಡು, ಆಶಾ ಭಟ್​, ಮೇಘಾ ಶೆಟ್ಟಿ, ರಮೇಶ್​ ಅರವಿಂದ್​, ಅಭಿಷೇಕ್ ಅಂಬರೀಷ್​ ಸೇರಿದಂತೆ ಅನೇಕ ನಟ-ನಟಿಯರು ‘ಕಾಟೇರ’ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾಗೆ ರಾಕ್​ಲೈನ್​ ವೆಂಕಟೇಶ್​ ಬಂಡವಾಳ ಹೂಡಿದ್ದು, ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More