ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು

Edited By:

Updated on: Jan 05, 2026 | 6:52 PM

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ 2026ರ ಮಹಾರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಚಾಲನೆ ನೀಡಿದರು. ಐದು ಲಕ್ಷಕ್ಕೂ ಅಧಿಕ ಭಕ್ತರು, ಜನಪ್ರತಿನಿಧಿಗಳು ಮತ್ತು ಎನ್.ಸಿ.ಸಿ. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭವ್ಯ ರಥೋತ್ಸವ ಜರುಗಿತು. ಭಕ್ತರು ಉತ್ತುತ್ತಿ ಎಸೆದು ಭಕ್ತಿ ಸಮರ್ಪಿಸಿದರು, ಇರುವೆಗಳಂತೆ ಭಕ್ತಸಾಗರ ಕಂಗೊಳಿಸಿತು.

ಕೊಪ್ಪಳ, ಜನವರಿ 05: ಐತಿಹಾಸಿಕ ಗವಿಸಿದ್ದೇಶ್ವರ ಮಹಾರಥೋತ್ಸವವು ಭಕ್ತಿ ಮತ್ತು ಸಡಗರದಿಂದ ಜರುಗಿತು. ರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಚಾಲನೆ ನೀಡಿದ್ದು, ಸುಮಾರು 5 ಲಕ್ಷ ಜನರು ಈ ವೇಳೆ ಭಾಗಿಯಾಗಿದ್ದರು. ರಾಜ್ಯದ ಅನೇಕ ಜನಪ್ರತಿನಿಧಿಗಳು  ಸ್ವ ಇಚ್ಛೆಯಿಂದ ಗವಿಸಿದ್ದೇಶ್ವರನ ಆಶೀರ್ವಾದ ಪಡೆಯಲು ಮತ್ತು ಈ ಪುಣ್ಯ ಕಾರ್ಯಕ್ಕೆ ಸಾಕ್ಷಿಯಾಗಲು ಆಗಮಿಸಿದ್ದರು. ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಶಿವರಾಜ ತಂಗಡಗಿ, ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿ ಹಲವರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.