ಧ್ರುವ ಸರ್ಜಾ-ಪ್ರೇರಣಾಗೆ ಹೆಣ್ಣು ಮಗು; ರಾಯನ್ ಜತೆ ಬಂದು ಪ್ರತಿಕ್ರಿಯೆ ನೀಡಿದ ಮೇಘನಾ ರಾಜ್
ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಧ್ರುವ-ಪ್ರೇರಣಾ ದಂಪತಿಯ ಮಗುವನ್ನು ನೋಡಿದ ಬಳಿಕ ಮೇಘನಾ ರಾಜ್ ಅವರು ಸಂತಸ ಹಂಚಿಕೊಂಡಿದ್ದಾರೆ.
ನಟ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಶಂಕರ್ (Prerana Shankar) ಇಂದು (ಅ.2) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ಆಗಮನದ ಖುಷಿಯಿಂದ ಕುಟುಂಬದವರ ಮೊಗದಲ್ಲಿ ನಗು ಅರಳಿದೆ. ಧ್ರುವ ಸರ್ಜಾ (Dhruva Sarja) ಅವರ ಅತ್ತಿಗೆ ಮೇಘನಾ ರಾಜ್ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಪುತ್ರ ರಾಯನ್ ರಾಜ್ ಜೊತೆ ಖಾಸಗಿ ಆಸ್ಪತ್ರೆಗೆ ಬಂದ ಮೇಘನಾ ರಾಜ್ (Meghana Raj) ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ತಾಯಿ-ಮಗು ಆರೋಗ್ಯವಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.
Published on: Oct 02, 2022 04:34 PM