AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ಗೆ ಸಖತ್ ಇಷ್ಟವಾಯ್ತು ‘ಆಚಾರ್ ಆ್ಯಂಡ್ ಕೋ’ ಸಿನಿಮಾ; ಕಾರಣ ತಿಳಿಸಿದ ನಟಿ

ಮೇಘನಾ ರಾಜ್​ಗೆ ಸಖತ್ ಇಷ್ಟವಾಯ್ತು ‘ಆಚಾರ್ ಆ್ಯಂಡ್ ಕೋ’ ಸಿನಿಮಾ; ಕಾರಣ ತಿಳಿಸಿದ ನಟಿ

ರಾಜೇಶ್ ದುಗ್ಗುಮನೆ
|

Updated on: Jul 27, 2023 | 8:31 AM

Share

‘ಆಚಾರ್​ ಆ್ಯಂಡ್ ಕೋ’ ಸಿನಿಮಾ ಜುಲೈ 28ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮೇಘನಾ ರಾಜ್ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

‘ಆಚಾರ್​ ಆ್ಯಂಡ್ ಕೋ’ ಸಿನಿಮಾ (Achar And Co Movie) ಜುಲೈ 28ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅನೇಕರು ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಸಾಲಿನಲ್ಲಿ ಮೇಘನಾ ರಾಜ್ (Meghana Raj) ಕೂಡ ಇದ್ದಾರೆ. ‘ನಾನು ದಕ್ಷಿಣ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವಳು. ಈ ಸಿನಿಮಾ ನೋಡಿದಾಗ ನನಗೆ ನನ್ನ ಅಜ್ಜಿ ಮನೆ ನೆನಪಿಗೆ ಬಂತು. ಈ ಕಥೆಯನ್ನು ಆಯ್ಕೆ ಮಾಡಿಕೊಂಡು ಸಿನಿಮಾ ಮಾಡಿದ ಅಶ್ವಿನಿ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಮೇಘನಾ ರಾಜ್. ಜೊತೆಗೆ ಇಡೀ ಟೀಂನ ಕೆಲಸವನ್ನು ಅವರು ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More