ಅತ್ತಿಗೆ ಮೇಘನಾ ರಾಜ್ ಕಮ್​ಬ್ಯಾಕ್​ಗೆ ಧ್ರುವ ಸರ್ಜಾ ಬೆಂಬಲ

Meghana Raj: ನಟಿ ಮೇಘನಾ ರಾಜ್, 'ತತ್ಸಮ ತದ್ಭವ' ಹೆಸರಿನ ಸಿನಿಮಾದಲ್ಲಿ ಗೆಳೆಯ ಪ್ರಜ್ವಲ್ ದೇವರಾಜ್​ಗೆ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಧ್ರುವ ಸರ್ಜಾ, ಅತ್ತಿಗೆಯ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ನಟಿ ಮೇಘನಾ ರಾಜ್ (Meghana Raj)  ಜೀವನದಲ್ಲಿ ಹಲವು ಘಟನೆಗಳು ನಡೆದಿವೆ. ಪತಿ ಚಿರಂಜೀವಿ ಸರ್ಜಾ ಅನ್ನು ಕಳೆದುಕೊಂಡಿದ್ದಾರೆ. ಅದಾದ ಕೆಲವೇ ದಿನಗಳಲ್ಲಿ ಮೇಘನಾ ರಾಜ್ ಮಗುವಿಗೆ ಜನ್ಮ ನೀಡಿದರು. ಒಂದು ಸಮಯದಲ್ಲಿ ಬೇಡಿಕೆಯ ನಟಿಯಾಗಿದ್ದ ಮೇಘನಾ, ಮದುವೆಯ ಬಳಿಕ ಚಿತ್ರರಂಗದಿಂದ ಸಣ್ಣ ಮಟ್ಟಿಗಿನ ಅಂತರ ಕಾಯ್ದುಕೊಂಡಿದ್ದ ನಟಿ, ಇದೀಗ ಬದಲಾದ ಸನ್ನಿವೇಶದಲ್ಲಿ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಮೇಘನಾ ನಟಿಸಿರುವ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಿದ್ದು, ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಧ್ರುವ ಸರ್ಜಾ ಅತ್ತಿಗೆ ಮೇಘನಾ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 3:39 pm, Sun, 27 August 23

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us