AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನಿ

ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನಿ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 04, 2026 | 10:36 AM

Share

ರಾಜ್ಯ ಸರ್ಕಾರದ ಪಿಎಂ ಕುಸುಮ್ ಯೋಜನೆ ಅಡಿಯಲ್ಲಿ ಎಂಇಐಎಲ್ ಕಂಪನಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೌರ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಹಗಲು ಹೊತ್ತಿನಲ್ಲಿ ಗುಣಮಟ್ಟದ ವಿದ್ಯುತ್ ಒದಗಿಸುತ್ತಿದೆ. ಇದರಿಂದ ನೀರಾವರಿಗೆ ಅನುಕೂಲವಾಗಿ, 25,000ಕ್ಕೂ ಹೆಚ್ಚು ರೈತರು ಉತ್ತಮ ಬೆಳೆಗಳನ್ನು ಬೆಳೆಯುತ್ತಿದ್ದಾರೆ.  ವಿದ್ಯುತ್ ಸಮಸ್ಯೆಗಳಿಗೆ ಇದು ಪರಿಹಾರ ನೀಡಿದೆ.

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 04: ಕಳೆದ ಹಲವು ವರ್ಷಗಳಿಂದ ರಾಜ್ಯದ ರೈತರು ವಿದ್ಯುತ್ ಸಮಸ್ಯೆಗಳಿಂದ ತತ್ತರಿಸಿದ್ದರು. ಅನಿಶ್ಚಿತ ವಿದ್ಯುತ್ ಪೂರೈಕೆ, ಕಡಿಮೆ ವೋಲ್ಟೇಜ್, ಮತ್ತು ರಾತ್ರಿಯ ವೇಳೆ ಕಾಡುಪ್ರಾಣಿಗಳ ಭಯದಿಂದ ತೋಟಗಾರಿಕೆ ರೈತರು ಬೋರ್‌ವೆಲ್‌ಗಳನ್ನು ನಿರ್ವಹಿಸಲು ಪರದಾಡುತ್ತಿದ್ದರು. ಈ ಸಮಸ್ಯೆಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪಿಎಂ ಕುಸುಮ್ ಯೋಜನೆಯನ್ನು ರಾಜ್ಯ ಸರ್ಕಾರ ಈಗ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ.

ಈ ಯೋಜನೆ ಅಡಿಯಲ್ಲಿ, ಮೆಗಾ ಇಂಜಿನಿಯರಿಂಗ್ ಆ್ಯಂಡ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ (ಎಂಇಐಎಲ್) ಕಂಪನಿಯು ರಾಜ್ಯ ಸರ್ಕಾರಕ್ಕೆ ಕೈಜೋಡಿಸಿದೆ. ರಾಜ್ಯಾದ್ಯಂತ 88ಕ್ಕೂ ಹೆಚ್ಚು ಘಟಕಗಳನ್ನು ನಿರ್ಮಿಸುತ್ತಿರುವ ಎಂಇಐಎಲ್, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 28 ಸೋಲಾರ್ ಘಟಕಗಳಲ್ಲಿ 21ನ್ನು ಸ್ಥಾಪಿಸುತ್ತಿದೆ. ಗೌರಿಬಿದನೂರು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮತ್ತು ಚಿಂತಾಮಣಿ ತಾಲೂಕುಗಳಲ್ಲಿ ರೈತರಿಗೆ ಹೆಚ್ಚಾಗಿ ವಿದ್ಯುತ್ ಅಗತ್ಯವಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳನ್ನು ಗುತ್ತಿಗೆ ಪಡೆದು ಸೌರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

ಇದರಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ 80 ಮೆಗಾ ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಇದನ್ನು ನೇರವಾಗಿ ರೈತರ ಪಂಪ್‌ಸೆಟ್‌ಗಳಿಗೆ ಪೂರೈಸಲಾಗುತ್ತಿದೆ. ಸುಮಾರು 25,000ಕ್ಕೂ ಹೆಚ್ಚು ರೈತರು ಹಗಲು ಹೊತ್ತಿನಲ್ಲಿ ಗುಣಮಟ್ಟದ ವಿದ್ಯುತ್ ಪಡೆದು, ನಿರಾತಂಕವಾಗಿ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದು ರೈತರ ಕಣ್ಣಲ್ಲಿ ಹೊಸ ಭರವಸೆ ಮೂಡಿಸಿದೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us