ಮೇಕೆದಾಟು ವಿವಾದ; ಕರ್ನಾಟಕದ ಡಿಪಿಆರ್ ತಿರಸ್ಕರಿಸಲು ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ಕೂಡಲೇ ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆ ಜಾರಿಯಾದರೆ, ತಮಿಳುನಾಡಿಗೆ ಹಂಚಿಕೆಯಾಗಿರುವ ಕಾವೇರಿ ನದಿಯ ನೀರಿನ ಪಾಲಿಗೆ ಗಂಭೀರ ಅಪಾಯ ಎದುರಾಗಲಿದೆ ಎಂದು ಸಿಎಂ ವಿಜಯ್ ಆತಂಕ ವ್ಯಕ್ತಪಡಿಸಿದ್ದಾರೆ.
ನವದೆಹಲಿ, ನವೆಂಬರ್ 7: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯು ಮತ್ತೊಮ್ಮೆ ಕಾವೇರಿ ಜಲ ವಿವಾದಕ್ಕೆ ಕಾರಣವಾಗಿದೆ. ಈ ಮಹತ್ವದ ಯೋಜನೆಗೆ ತಮಿಳುನಾಡು ರಾಜ್ಯವು ತನ್ನ ತೀವ್ರ ವಿರೋಧವನ್ನು ಪುನರುಚ್ಚರಿಸಿದೆ. ಆಣೆಕಟ್ಟು ನಿರ್ಮಾಣಕ್ಕೆ ಯಾವುದೇ ಅನುಮೋದನೆಯನ್ನು ನೀಡದಂತೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ತಮಿಳುನಾಡಿನ ಒಪ್ಪಿಗೆ ಇಲ್ಲದೆ ಈ ಯೋಜನೆಯನ್ನು ಕಾರ್ಯಗತಗೊಳಿಸುವುದು ಅಸಾಧ್ಯ ಎಂದು ಅದು ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ಕೂಡಲೇ ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆ ಜಾರಿಯಾದರೆ, ತಮಿಳುನಾಡಿಗೆ ಹಂಚಿಕೆಯಾಗಿರುವ ಕಾವೇರಿ ನದಿಯ ನೀರಿನ ಪಾಲಿಗೆ ಗಂಭೀರ ಅಪಾಯ ಎದುರಾಗಲಿದೆ ಎಂದು ಸಿಎಂ ವಿಜಯ್ ಆತಂಕ ವ್ಯಕ್ತಪಡಿಸಿದ್ದಾರೆ.
ಅವರು ತಮ್ಮ ಪತ್ರದಲ್ಲಿ, ಈ ಯೋಜನೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಹಲವು ದಶಕಗಳಿಂದ ಕರ್ನಾಟಕ ಮತ್ತು ತಮಿಳುನಾಡು ನಡುವೆ ವಿವಾದ ಮುಂದುವರಿದಿದ್ದು, ಮೇಕೆದಾಟು ಯೋಜನೆಯು ಈ ವಿವಾದಕ್ಕೆ ಹೊಸ ಆಯಾಮವನ್ನು ಸೇರಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸ್ಟಿಂಗ್ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ

