ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಕ್ಯಾತೆ: ಪ್ರಧಾನಿ ಮೋದಿಗೆ ಪತ್ರ ಬರೆದ ವಿಜಯ್
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಕಾವೇರಿ ನದಿಯಲ್ಲಿ ಯಾವುದೇ ಯೋಜನೆ ಕೈಗೊಳ್ಳದಂತೆ ಕರ್ನಾಟಕಕ್ಕೆ ಸೂಚಿಸುವಂತೆ ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿಜಯ್, ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಆಗದಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಚೆನ್ನೈ, ಮೇ 26: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ ತೆಗೆದಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದು ಕರ್ನಾಟಕಕ್ಕೆ ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ. ಕಾವೇರಿ ನದಿಯಲ್ಲಿ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ತೀರ್ಪು ಉಲ್ಲಂಘಿಸದಂತೆ ಕರ್ನಾಟಕಕ್ಕೆ ಸಲಹೆ ನೀಡಿ ಎಂದು ವಿಜಯ್ ತಿಳಿಸಿದ್ದಾರೆ. ಈ ಸಂಬಂಧ ಇಂದು ಮೋದಿಗೆ ಪತ್ರ ಬರೆದಿರುವ ಅವರು, ನಾಳೆ ಸಂಜೆ 4 ಗಂಟೆಗೆ ಪ್ರಧಾನಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us


