AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

ದಿಲೀಪ್​, ಚೌಡಹಳ್ಳಿ
| Edited By: |

Updated on:Jun 21, 2026 | 11:15 AM

Share

ಮೇಕೆದಾಟು ಯೋಜನೆಗೆ ತಮಿಳುನಾಡಿನ ನಿರಂತರ ಆಕ್ಷೇಪಗಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕಾಗಿ ಈ ಯೋಜನೆ ನಿರ್ಣಾಯಕವಾಗಿದೆ. ದೇವೇಗೌಡರ ನಾಯಕತ್ವದಲ್ಲಿ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದರೂ, ತಮಿಳುನಾಡು ಸಹಮತ ನೀಡುತ್ತಿಲ್ಲ. ರಾಜಕೀಯ ಪ್ರತಿಷ್ಠೆ ಬದಿಗಿಟ್ಟು ಸಹೋದರತ್ವದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಂಡ್ಯ, ಜೂನ್​​ 21: ಮೇಕೆದಾಟು ಯೋಜನೆಗೆ ತಮಿಳುನಾಡು ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಕುಡಿಯುವ ನೀರಿಗಾಗಿ ಮಾಡಲಾಗುತ್ತಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸಹಮತ ಕೊಡಬೇಕು‌.ರಾಜಕೀಯ, ಪ್ರತಿಷ್ಠೆಗಾಗಿ ಅಲ್ಲಿನ ಪಕ್ಷಗಳು ದಬ್ಬಾಳಿಕೆ ಮಾಡಬಾರದು. ಈ ಕ್ಯಾತೆ 50 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಉತ್ತಮ ಮಳೆಯಾದಾಗ ಕರ್ನಾಟಕವು ನ್ಯಾಯಮಂಡಳಿ ಆದೇಶಕ್ಕಿಂತಲೂ ಎರಡು ಪಟ್ಟು ಹೆಚ್ಚು ನೀರನ್ನು ಬಿಡುಗಡೆ ಮಾಡಿದೆ. ಆದರೆ ನಮ್ಮಲ್ಲಿಯೇ ಜಲಾಶಯಗಳು ಭರ್ತಿಯಾಗದಿದ್ದಾಗಲೂ ನೀರಿಗಾಗಿ ಒತ್ತಾಯಿಸುವುದು ಸೂಕ್ತವಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 21, 2026 11:15 AM

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More