ಮೇಕೆದಾಟು ಯೋಜನೆಯಿಂದ ಕರ್ನಾಟಕ-ತಮಿಳುನಾಡು ಎರಡೂ ರಾಜ್ಯಗಳಿಗೆ ಪ್ರಯೋಜನ: ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆಯಿಂದ ಕರ್ನಾಟಕ-ತಮಿಳುನಾಡು ಎರಡೂ ರಾಜ್ಯಗಳಿಗೆ ಪ್ರಯೋಜನ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 09, 2025 | 7:34 PM

ನಕ್ಸಲರ ಶರಣಾಗತಿಯಲ್ಲಿ ತಮಿಳುನಾಡುವಿನ ಪಾತ್ರವೂ ಇದೆಯೆಂದು ಹೇಳಿದ ಶಿವಕುಮಾರ್, ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣೆ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಕೊನೆಗಾಣಿಸಬೇಕೆಂಬ ಹುನ್ನಾರ ನಡೆಸಿದೆ, ಆದರೆ ಕಾಂಗ್ರೆಸ್ ಪಕ್ಷವು ಈ ಯೋಜನೆಯನ್ನು ವಿರೋಧಿಸುತ್ತದೆ, ತಮಿಳುನಾಡು ಸಹ ವಿರೋಧಿಸುತ್ತಿದೆ ಎಂದರು.

ಕುಂಭಕೋಣಂ: ತಮಿಳುನಾಡುನಲ್ಲಿರುವ ಪ್ರತ್ಯಂಗಿರಾ ದೇವಿ ದೇವಸ್ಥಾನದಲ್ಲಿ ತಮ್ಮ ಧರ್ಮಪತ್ನಿಯೊಂದಿಗೆ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲ್ಲಿನ ಮಾಧ್ಯಮ ಪ್ರತಿನಿಧಿಗಳು ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾಪಿಸಿದಾಗ ಮಾತಾಡಿದ ಶಿವಕುಮಾರ್, ಯೋಜನೆಯಿಂದ ಕೇವಲ ಕರ್ನಾಟಕ ಮಾತ್ರವಲ್ಲ ತಮಿಳುನಾಡಿಗೂ ಪ್ರಯೋಜನವಾಗಲಿದೆ, ಎರಡೂ ರಾಜ್ಯಗಳ ನಡುವೆ ಮುಕ್ತವಾಗಿ ಮಾತುಕತೆ ನಡೆಯಬೇಕು, ತಮ್ಮ ಉದ್ದೇಶ 462 ಟಿಎಂಸಿ ನೀರು ಪೋಲಾಗುವುದನ್ನು ತಡೆಗಟ್ಟಿ ನೀರಿನ ಸದ್ಬಳಕೆಯಾಗಬೇಕು ಅನ್ನುವುದಾಗಿದೆ, ವಿಷಯವೀಗ ನ್ಯಾಯಾಲಯದಲ್ಲಿದ್ದು ಅದು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡುವ ವಿಶ್ವಾಸ ತಮಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್