ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಶ್ರೀದೇವಿ ಮತ್ತು ಭೂದೇವಿ ಸಹಿತ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಚಲುವನಾರಾಯಣಸ್ವಾಮಿಯು ಸಹಸ್ರಾರು ಭಕ್ತರಿಗೆ ದರ್ಶನ ನೀಡಿದರು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತರು ನೆರೆದಿದ್ದರು.
ಮಂಡ್ಯ, ಮಾರ್ಚ್ 29: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ದೇವಾಲಯದ ಆವರಣವು ಭಕ್ತಿ-ಭಾವಗಳಿಂದ ತುಂಬಿ ತುಳುಕುತ್ತಿತ್ತು. ಭಕ್ತರು ಜೈ ಚಲುವನಾರಾಯಣಸ್ವಾಮಿ ಎಂದು ಜಯಘೋಷಗಳನ್ನು ಕೂಗುತ್ತಾ, ತಮ್ಮ ಇಷ್ಟದ ದೇವರ ದರ್ಶನ ಪಡೆದು ಪುನೀತರಾದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 29, 2026 09:30 AM
Loading...
Unable to load recommendations.
Follow Us
