ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಕಲಬುರಗಿಯಲ್ಲಿ ಮುಖ್ಯಮಂತ್ರಿಗಳಿಗೆ ತಳವಾರ ಸಮುದಾಯದ ಯುವಕರಿಂದ ಕಪ್ಪುಬಾವುಟ ಪ್ರದರ್ಶನ
ಈ ಸಂದರ್ಭದಲ್ಲಿ ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದರು.
ಕಲಬುರಗಿ: ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು (Hyderabad-Karnataka Liberation Day) ಈಗ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಅಂತ ಕರೆಯಲಾಗುತ್ತಿದೆ. ಕಲಬುರಗಿಯಲ್ಲಿ (Kalaburagi) ಶನಿವಾರ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ತಿಮ್ಮಾಪುರಿ ಸರ್ಕಲ್ ನಲ್ಲಿರುವ ಹೈದರಾಬಾದ್-ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ್ ವಲ್ಲಭ್ ಭಾಯಿ ಪಟೇಲ್ (Sardar Vallabhbhai Patel) ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದರು.
Published on: Sep 17, 2022 11:44 AM