AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮೊಬೈಲ್​ ಟವರ್​ ಏರಿದ ಮಾನಸಿಕ ಅಸ್ವಸ್ಥ, ವಿಡಿಯೋ ನೋಡಿ

ವಿಜಯಪುರ: ಮೊಬೈಲ್​ ಟವರ್​ ಏರಿದ ಮಾನಸಿಕ ಅಸ್ವಸ್ಥ, ವಿಡಿಯೋ ನೋಡಿ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 19, 2024 | 2:58 PM

Share

ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಶಿವು ಕಡಣಿ ಮೊಬೈಲ್​ ಟವರ್​ ಏರಿ ಕುಳಿತಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಯುವಕ ಶಿವು ಕಡಣಿ ಮಾನಸಿಕ ಅಸ್ವಸ್ಥನಾಗಿದ್ದು, ಈ ಹಿಂದೆ ಕೂಡ ಸಿಂದಗಿ ತಾಲೂಕಿನ ಬಳಗಾನೂರು ಹಾಗೂ ಇತರೆ ಗ್ರಾಮಗಳಲ್ಲಿರುವ ಟವರ್​ಗಳನ್ನು ಏರಿದ್ದನು.

ವಿಜಯಪುರ, ಮಾರ್ಚ್​ 19: ಮಾನಸಿಕ ಅಸ್ವಸ್ಥ ಯುವಕ ಇಂಡಿ (Indi) ಪಟ್ಟಣದ ಬಸವೇಶ್ವರ ಸರ್ಕಲ್​ನಲ್ಲಿರುವ ಮೊಬೈಲ್ ಟವರ್​​ನ್ನು (Mobile Tower) ಏರಿದ್ದಾನೆ. ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಶಿವು ಕಡಣಿ ಟವರ್​ ಏರಿ ಕುಳಿತಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಯುವಕನನ್ನು ಕೆಳಗಿಳಿಸಿದ್ದಾರೆ. ಬಳಿಕ ಪೊಲೀಸರು ಶಿವು ಕಡಣಿಯನ್ನು ಮನೆಗೆ ಬಿಟ್ಟು ಬಂದರು. ಶಿವು ಕಡಣಿ ಈ‌ ಹಿಂದೆ ಸಿಂದಗಿ ತಾಲೂಕಿನ ಬಳಗಾನೂರು ಹಾಗೂ ಇತರೆ ಗ್ರಾಮಗಳಲ್ಲಿರುವ ಟವರ್​ಗಳನ್ನು ಏರಿದ್ದನು. ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿ‌ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More