Sign In

By signing in or creating an account, you agree with Associated Broadcasting Company's Terms & Conditions and Privacy Policy.

Merry Christmas 2024: ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ

Merry Christmas 2024: ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ

Kiran Surya
| Updated By: Ganapathi Sharma

Updated on: Dec 25, 2024 | 9:30 AM

Christmas Day Celebrations: ಇಂದು ನಾಡಿನೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ ಮನೆ ಮಾಡಿದ್ದು, ಕ್ರೈಸ್ತ ಬಾಂಧವರು ಎಲ್ಲೆಡೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ಸೆಂಟ್‌ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಗುತ್ತಿದೆ. ಇಂದು ಯೇಸುವಿನ ಜನ್ಮದಿನ ಹಿನ್ನೆಲೆ ಅದ್ದೂರಿ ಹಬ್ಬ ಆಚರಣೆ ಮಾಡಲಾಗುತ್ತಿದೆ.

ಬೆಂಗಳೂರು, ಡಿಸೆಂಬರ್ 25: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಸ್‍ಮಸ್ ಹಬ್ಬದ ಸಡಗರ ಮನೆ ಮಾಡಿದೆ. ನಗರದ ಚರ್ಚ್​​ಗಳಲ್ಲಿ ಕ್ರಿಸ್​ಮಸ್ ಆಚರಣೆ ಜೋರಾಗಿದೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​ನಲ್ಲಿ ಕ್ರಿಸ್ಮಸ್ ಸಂಭ್ರಮ ಮನೆಮಾಡಿದ್ದು, ಸುತ್ತ-ಮುತ್ತ ಹಬ್ಬದ ವಾತಾವರಣ ಇದೆ. ಮೇರಿ ಮಾತೆಗೆ ಕ್ಯಾಂಡಲ್ ಹಚ್ಚುವ ಮೂಲಕ ಕ್ರಿಶ್ಚಿಯನ್ನರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್ ವಿದ್ಯುತ್ ದೀಪಾಲಂಕಾರದೊಂದಿಗೆ ಝಗಮಗಿಸುತ್ತಿದೆ.

ಮಂಗಳವಾರ ಮಧ್ಯರಾತ್ರಿಯಿಂದಲೇ ಚರ್ಚ್​​ನಲ್ಲಿ ವಿಶೇಷ ಪ್ರಾರ್ಥನೆ ಆರಂಭವಾಗಿದೆ. ಇಂದು ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಐವತ್ತು ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚ್​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಹೇರಲಾಗಿದೆ. ಚರ್ಚ್​ಗೆ ಬರುವ ಜನರ ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ನಗರದ ಇತರ ಚರ್ಚ್​​ಗಳೂ ಲೈಟಿಂಗ್ಸ್​ನಲ್ಲಿ ಝಗಮಗಿಸುತ್ತಿವೆ. ವಿಡಿಯೋ ಇಲ್ಲಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ