ಕನ್ನಡ ರಾಜ್ಯೋತ್ಸವ ಬಂತು: ಬೆಳಗಾವಿಯಲ್ಲಿ ಮತ್ತೆ ಬಾಲ ಬಿಚ್ಚಿದ ಎಂಇಎಸ್
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮತ್ತೆ ಬಾಲ ಬಿಚ್ಚಿದೆ. ಹೌದು..ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆಗೆ ಮುಮದಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದಿದ್ದು, ಕರಾಳ ದಿನಾಚರಣೆಗೆ ಗಡಿ ಉಸ್ತುವಾರಿ ಕಳುಹಿಸುವಂತೆ ಮನವಿ ಮಾಡಿದೆ. ಇದರ ಜೊತೆಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಕರಾಳ ದಿನಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದೆ. ಇತ್ತ ಕರಾಳ ದಿನಕ್ಕೆ ಅವಕಾಶ ಮಾಡಿಕೊಡದಂತೆ ಕರ್ನಾಟಕ ರಕ್ಷಣಾ ವೇದಿಕೆ ಖಡಕ್ ಎಚ್ಚರಿಕೆ ನಿಡಿವೆ.
ಬೆಳಗಾವಿ, (ಅಕ್ಟೋಬರ್ 28): ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮತ್ತೆ ಬಾಲ ಬಿಚ್ಚಿದೆ. ಹೌದು..ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆಗೆ ಮುಮದಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದಿದ್ದು, ಕರಾಳ ದಿನಾಚರಣೆಗೆ ಗಡಿ ಉಸ್ತುವಾರಿ ಕಳುಹಿಸುವಂತೆ ಮನವಿ ಮಾಡಿದೆ. ಇದರ ಜೊತೆಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಕರಾಳ ದಿನಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದೆ. ಇತ್ತ ಕರಾಳ ದಿನಕ್ಕೆ ಅವಕಾಶ ಮಾಡಿಕೊಡದಂತೆ ಕರ್ನಾಟಕ ರಕ್ಷಣಾ ವೇದಿಕೆ ಖಡಕ್ ಎಚ್ಚರಿಕೆ ನಿಡಿವೆ.
ಇನ್ನು ಈ ಬಗ್ಗೆ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪ್ರತಿಕ್ರಿಯಿಸಿದ್ದು, ಈ ವರೆಗೂ ಯಾವುದೇ ಅನುಮತಿ ನೀಡಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನೋಡಿಕೊಳ್ಳುತ್ತವೆ. ಒಂದು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
