ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ

Updated on: Feb 13, 2025 | 2:55 PM

ಮೆಟ್ರೋ ಪ್ರಯಾಣಿಕರಿಗೆ ಈಗಾಗಲೇ ದರ ಏರಿಕೆ ಶಾಕ್ ತಟ್ಟಿದೆ. ಸಾಮಾನ್ಯ ದರದಲ್ಲೇ ಹಾಯಾಗಿ ಮೆಟ್ರೋದಲ್ಲಿ ಓಡಾಡುತ್ತಿದ್ದ ಲಕ್ಷಾಂತರ ಜನರಿಗೆ, ಮೆಟ್ರೋ ದರ ಏರಿಕೆ ಹೈರಾಣು ಮಾಡಿದೆ. ಅದ್ಯಾವ ಮಟ್ಟಿಗೆ ಅಂದರೆ, ಮೆಟ್ರೋ ಸಹವಾಸವೇ ಬೇಡ ಅನ್ನೋ ಮಟ್ಟಿಗೆ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯರೇ ಮೆಟ್ರೋ ಪ್ರಯಾಣ ದರ ಇಳಿಕೆಗೆ ಆಗ್ರಹ ಮಾಡಿದ್ದಾರೆ. ಈ ಮಧ್ಯೆ ಬಿಎಂಆರ್​ಸಿಎಲ್​​ ಎಂ.ಡಿ ಮಹೇಶ್ವರ್​​ ರಾವ್​ ಮಹತ್ವದ ಸುದ್ದಿಗೋಷ್ಠಿ ಮಾಡಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ.

ಬೆಂಗಳೂರು, ಫೆಬ್ರವರಿ 13: ನಗರದ ಅಚ್ಚುಮೆಚ್ಚಿನ ಸಾರಿಗೆಯಾಗಿರುವ ನಮ್ಮ ಮೆಟ್ರೋ (metro) ಸಂಚಾರ, ದುಬಾರಿ ಟಿಕೆಟ್​ ಬೆಲೆಯಿಂದಾಗಿ ಎಲ್ಲರ ವಿರೋಧಕ್ಕೆ ಕಾರಣವಾಗಿದೆ. ದರ ಏರಿಕೆ ಖಂಡಿಸಿ, ಜನರು ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟಿಸಿದ್ದರು. ಇಷ್ಟೆಲ್ಲಾ ಆಕ್ರೋಶದ ಬಳಿಕವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೆಟ್ರೋ ಟಿಕೆಟ್ ದರ ಇಳಿಕೆಗೆ ಮುಂದಾಗುತ್ತಾ ನೋಡಬೇಕಿದೆ. ಈ ಮಧ್ಯೆ ಬಿಎಂಆರ್​ಸಿಎಲ್​​ ಎಂ.ಡಿ ಮಹೇಶ್ವರ ರಾವ್​ ಮಹತ್ವದ ಸುದ್ದಿಗೋಷ್ಠಿ ಮಾಡಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 13, 2025 02:36 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More