Video: ನ್ಯೂಯಾರ್ಕ್​ನ ಬ್ರೂಕ್ಲಿನ್ ಸೇತುವೆಗೆ 200 ಪ್ರಯಾಣಿಕರಿದ್ದ ಮೆಕ್ಸಿಕನ್ ನೌಕಾಪಡೆಯ ಹಡಗು ಡಿಕ್ಕಿ

Updated on: May 18, 2025 | 9:21 AM

200ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಹಡಗು ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಸೇತುವೆಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ 19 ಜನರು ಗಾಯಗೊಂಡಿದ್ದಾರೆ, ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ ಅಪಘಾತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತದ ಸಮಯದಲ್ಲಿ ಬಿಳಿ ಸಮವಸ್ತ್ರ ಧರಿಸಿದ್ದ ಹಲವರು ಕೆಳಗೆ ಬೀಳಲಾರಂಭಿಸಿದರು.

ನ್ಯೂಯಾರ್ಕ್​: 200ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಹಡಗು ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಸೇತುವೆಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ 19 ಜನರು ಗಾಯಗೊಂಡಿದ್ದಾರೆ, ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ ಅಪಘಾತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತದ ಸಮಯದಲ್ಲಿ ಬಿಳಿ ಸಮವಸ್ತ್ರ ಧರಿಸಿದ್ದ ಹಲವರು ಕೆಳಗೆ ಬೀಳಲಾರಂಭಿಸಿದರು. ಕುವಾಹ್ಟೆಮೊಕ್ ಮೆಕ್ಸಿಕನ್ ನೌಕಾಪಡೆಯ ತರಬೇತಿ ಹಡಗು. ಇದು 15 ದೇಶಗಳಲ್ಲಿ 22 ಬಂದರುಗಳಿಗೆ ಭೇಟಿ ನೀಡಬೇಕಿತ್ತು. ಕೆಡೆಟ್ ತರಬೇತಿ ಹಡಗು ನ್ಯೂಯಾರ್ಕ್ ಬಂದರಿನಿಂದ ಹೊರಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More