AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ

ಝಾಹಿರ್ ಯೂಸುಫ್
|

Updated on:Jan 03, 2026 | 7:38 AM

Share

International League T20, 2025-26: ಭಾನುವಾರ ನಡೆಯಲಿರುವ ಫೈನಲ್​ನಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಚಾಂಪಿಯನ್ ಎನಿಸಿಕೊಳ್ಳಲಿದೆ. ಎಂಐ ಎಮಿರೇಟ್ಸ್ ಗೆದ್ದರೆ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡ ಎನಿಸಿಕೊಳ್ಳಲಿದೆ.

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ.

121 ರನ್​​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 16.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಎಂಐ ಎಮಿರೇಟ್ಸ್​ ತಂಡವು ಎರಡನೇ ಬಾರಿಗೆ ಫೈನಲ್​ಗೇರಿದೆ.

ಭಾನುವಾರ ನಡೆಯಲಿರುವ ಫೈನಲ್​ನಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಚಾಂಪಿಯನ್ ಎನಿಸಿಕೊಳ್ಳಲಿದೆ.

 

Published on: Jan 03, 2026 07:37 AM