ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
International League T20, 2025-26: ಭಾನುವಾರ ನಡೆಯಲಿರುವ ಫೈನಲ್ನಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಚಾಂಪಿಯನ್ ಎನಿಸಿಕೊಳ್ಳಲಿದೆ. ಎಂಐ ಎಮಿರೇಟ್ಸ್ ಗೆದ್ದರೆ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡ ಎನಿಸಿಕೊಳ್ಳಲಿದೆ.
ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್ಗಳು ಮಾತ್ರ.
121 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 16.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಎಂಐ ಎಮಿರೇಟ್ಸ್ ತಂಡವು ಎರಡನೇ ಬಾರಿಗೆ ಫೈನಲ್ಗೇರಿದೆ.
ಭಾನುವಾರ ನಡೆಯಲಿರುವ ಫೈನಲ್ನಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಚಾಂಪಿಯನ್ ಎನಿಸಿಕೊಳ್ಳಲಿದೆ.
Published on: Jan 03, 2026 07:37 AM
