ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್ಗೆ MI ಪಡೆ
Major League Cricket 2025: ಈ ಗೆಲುವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ಗೆ ಪ್ರವೇಶಿಸಿದ್ದು, ಭಾನುವಾರ (ಜುಲೈ 13) ನಡೆಯಲಿರುವ ಅಂತಿಮ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ನಿಕೋಲಸ್ ಪೂರನ್ ಮುಂದಾಳತ್ವದ ಎಂಐ ನ್ಯೂಯಾರ್ಕ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಎಂಐ ಪಡೆ ಫೈನಲ್ಗೆ ಲಗ್ಗೆಯಿಟ್ಟಿದೆ. ಡಲ್ಲಾಸ್ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಎಂಐ ನ್ಯೂಯಾರ್ಕ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ನಾಯಕ ಫಾಫ್ ಡುಪ್ಲೆಸಿಸ್ (59) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 166 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಎಂಐ ನ್ಯೂಯಾರ್ಕ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.
ಆದರೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 52 ರನ್ ಬಾರಿಸಿದರೆ, 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೀರನ್ ಪೊಲಾರ್ಡ್ 22 ಎಸೆತಗಳಲ್ಲಿ 4 ಫೋರ್ ಹಾಗೂ 3 ಭರ್ಜರಿ ಸಿಕ್ಸ್ಗಳೊಂದಿಗೆ ಅಜೇಯ 47 ರನ್ ಚಚ್ಚಿದರು. ಈ ಮೂಲಕ ಎಂಐ ನ್ಯೂಯಾರ್ಕ್ ತಂಡವು 19 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 173 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ಗೆ ಪ್ರವೇಶಿಸಿದ್ದು, ಭಾನುವಾರ (ಜುಲೈ 13) ನಡೆಯಲಿರುವ ಅಂತಿಮ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡವನ್ನು ಎದುರಿಸಲಿದೆ.

