MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್
MI vs RR IPL 2026: ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಗೆಲ್ಲಲೇಬೇಕಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿದ ರಾಜಸ್ಥಾನ್‌ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ವಿಫಲರಾಗಿದ್ದರಿಂದ ರಾಜಸ್ಥಾನ್ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್‌ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆದರೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ.
ರಾಜಸ್ಥಾನ್ ಈ ಪಂದ್ಯವನ್ನು ಗೆಲ್ಲಬೇಕಾದರೆ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅವರಿಂದ ಒಂದೊಳ್ಳೆ ಜೊತೆಯಾಟದ ಅವಶ್ಯಕತೆ ಇತ್ತು. ಆದರೆ ಇವರಿಬ್ಬರು ತಂಡಕ್ಕೆ ಅದನ್ನು ನೀಡುವಲ್ಲಿ ವಿಫಲರಾದರು. ಯಶಸ್ವಿ ಜೈಸ್ವಾಲ್ 17 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 27 ರನ್ ಬಾರಿಸಿ ಔಟಾದರೆ, ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ 6 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿ ಔಟಾದರು. ಹೀಗಾಗಿ ರಾಜಸ್ಥಾನ್ 33 ರನ್ಗಳಿಗೆ ತನ್ನ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು.


