ಮೈಕಲ್ ಅಜಯ್ (Michael Ajay) ಅವರಿಗೆ ಸ್ಪಷ್ಟವಾಗಿ ಕನ್ನಡ ಮಾತನಾಡೋಕೆ ಬರುವುದಿಲ್ಲ. ಆದರೂ ಅವರು ಕನ್ನಡ ಮಾತನಾಡುವುದನ್ನು ಕಲಿಯಲು ಪ್ರಯತ್ನಿಸುತ್ತಿದ್ದಾರೆ. ಕಳೆದ ವಾರ ಅವರಿಗೆ ಕಿಚ್ಚನ ಚಪ್ಪಾಳೆ ಸಿಗಲು ಇದುವೇ ಕಾರಣ. ಈಗ ಮೈಕಲ್ಗೆ ಕನ್ನಡ ಓದಬೇಕಾದ ಪರಿಸ್ಥಿತಿ ಬಂದೊದಗಿದೆ. ಟಾಸ್ಕ್ ಆಡುವಾಗ ಬಂದ ಲೆಟರ್ ಓದಬೇಕಿತ್ತು. ಅವರು ಕಷ್ಟಪಟ್ಟು ಕನ್ನಡ ಓದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ. ತಮ್ಮನ್ನು ತಾವು ಮಣ್ಣಿನ ಮಗ ಎಂದು ಮೈಕಲ್ ಕರೆದುಕೊಂಡಿದ್ದಾರೆ. ಈ ಪ್ರೋಮೋ ಸಖತ್ ವೈರಲ್ ಆಗಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ