Micromax In Note 2: ಗಣ ರಾಜ್ಯೋತ್ಸವ ಪ್ರಯುಕ್ತ ಬಿಡುಗಡೆ ಆಗುತ್ತಿದೆ ಭಾರತದ ಹೊಸ ಸ್ಮಾರ್ಟ್‌ಫೋನ್
ಗಣ ರಾಜ್ಯೋತ್ಸವದ ಪ್ರಯುಕ್ತ ಇದೇ ಜನವರಿ 25 ರಂದು ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್ ನೋಟ್ 2 (Micromax IN Note 2) ಫೋನ್ ಬಿಡುಗಡೆಗೆಗೊಳ್ಳಲಿದೆ.
ಚೀನಾ ಮೂಲದ ಸ್ಮಾರ್ಟ್‌ಫೋನ್ (Smartphone) ಬ್ರ್ಯಾಂಡ್‌ಗಳಿಗೆ ಸ್ಪರ್ಧೆ ಒಡ್ಡಲು ಮೈಕ್ರೋಮ್ಯಾಕ್ಸ್ ಭಾರತದಲ್ಲಿ ಹೊಸ ಫೋನ್ ಲಾಂಚ್ಗೆ ಸಿದ್ಧತೆ ನಡೆಸಿದೆ. ಗಣ ರಾಜ್ಯೋತ್ಸವದ ಪ್ರಯುಕ್ತ ಇದೇ ಜನವರಿ 25 ರಂದು ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್ ನೋಟ್ 2 (Micromax IN Note 2) ಫೋನ್ ಬಿಡುಗಡೆಗೆಗೊಳ್ಳಲಿದೆ. ಮೂಲಗಳ ಪ್ರಕಾರ ಮೈಕ್ರೋಮ್ಯಾಕ್ಸ್ ಇನ್ ನೋಟ್ 2 ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್ ಬಲವನ್ನು ಪಡೆದಿರುವ ಸಾಧ್ಯತೆ ಇದೆಯಂತೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಸಾದ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ ಫ್ಲಿಪ್ಕಾರ್ಟ್ನಲ್ಲಿ ಸೇಲ್ ಆಗಲಿದೆ.
Latest Videos