ಬೆಂಗಳೂರಿನಿಂದ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳು ರದ್ದು: ಏರ್‌ಲೈನ್ಸ್‌ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಆಕ್ರೋಶ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2024 | 7:08 PM

ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿವಿಧೆಡೆಗೆ ತೆರಳಬೇಕಿದ್ದ 21 ಇಂಡಿಗೋ ವಿಮಾನಗನ್ನು ರದ್ದು ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ಕಡೆಗಳಿಗೆ ತೆರಳಲಾಗದೆ ಪ್ರಯಾಣಿಕರು ಪರದಾಡಿದ್ದಾರೆ. ಏರ್‌ಲೈನ್ಸ್‌ ಸಿಬ್ಬಂದಿ ಸೇರಿ ಯಾರೊಬ್ಬರೂ ಸ್ಪಂದಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜುಲೈ 19: ವಿಶ್ವದಾದ್ಯಂತ ಮೈಕ್ರೋಸಾಫ್ಟ್​ನಲ್ಲಿ ತಾಂತ್ರಿಕ ದೋಷ (Microsoft’s Cloud Service Problem) ಕಂಡುಬಂದಿದೆ. ಹೀಗಾಗಿ ವಿಮಾನ ಸಂಚಾರದಲ್ಲಿ, ರೈಲು ಸಂಚಾರದಲ್ಲಿ, ಬ್ಯಾಂಕಿಂಗ್, ಷೇರು ಪೇಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ಅರದಲ್ಲೂ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿವಿಧೆಡೆಗೆ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ಅಕ್ಷರಶಃ ಪ್ರಯಾಣಿಕರು ಪರದಾಡಿದ್ದಾರೆ. ಈ ಬಗ್ಗೆ ಏರ್‌ಲೈನ್ಸ್‌ ಸಿಬ್ಬಂದಿ ಸೇರಿದಂತೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲವೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಏರ್‌ಲೈನ್ಸ್‌ ಕಚೇರಿಯಲ್ಲಿ ಮಾಹಿತಿ ಪಡೆಯಲು ಗಂಟೆಗಟ್ಟಲೇ ಕ್ಯೂ ನಿಲ್ಲಬೇಕಾಗಿದ್ದು, ಯಾವ ಫ್ಲೈಟ್ ರದ್ದಾಗಿದೆ, ಯಾವುದು ಸಿದ್ಧವಿದೆ ಎಂಬ ಬಗ್ಗೆ ಮಾಹಿತಿ ಕೂಡ ಕೊಡಿಲ್ಲವಂತೆ. ಹಾಗಾಗಿ ಇಂಡಿಗೋ ಏರ್‌ಲೈನ್ಸ್‌ ಸಿಬ್ಬಂದಿಯ ವಿರುದ್ಧ ಪ್ರಯಾಣಿಕರು ಗರಂ ಆಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on