Video: ಎಂಜಿನ್​​ನಲ್ಲಿ ಬೆಂಕಿ, ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ

Updated on: Jul 20, 2025 | 11:23 AM

ಡೆಲ್ಟಾ ವಿಮಾನದ ಎಂಜಿನ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾಸ್​ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಟ್ಲಾಂಟಾಗೆ ತೆರಳುತ್ತಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನವು ಶುಕ್ರವಾರ ಲಾಸ್ ಏಂಜಲೀಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (LAX) ತುರ್ತು ಭೂಸ್ಪರ್ಶ ಮಾಡಬೇಕಾಯಿತು.ಏಕೆಂದರೆ ಅದರ ಒಂದು ಎಂಜಿನ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬೆಂಕಿ ಕಾಣಿಸಿಕೊಂಡಿತ್ತು.

ಲಾಸ್ ಏಂಜಲೀಸ್​, ಜುಲೈ 20: ಡೆಲ್ಟಾ ವಿಮಾನದ ಎಂಜಿನ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾಸ್​ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಟ್ಲಾಂಟಾಗೆ ತೆರಳುತ್ತಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನವು  ಲಾಸ್ ಏಂಜಲೀಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (LAX) ತುರ್ತು ಭೂಸ್ಪರ್ಶ ಮಾಡಬೇಕಾಯಿತು.ಏಕೆಂದರೆ ಅದರ ಒಂದು ಎಂಜಿನ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬೆಂಕಿ ಕಾಣಿಸಿಕೊಂಡಿತ್ತು. ಸುಮಾರು 25 ವರ್ಷ ಹಳೆಯದಾದ ವಿಮಾನವು LAX ನಿಂದ ಹೊರಟಿತ್ತು, ಆಗಲೇ ವಿಮಾನದ ಸಿಬ್ಬಂದಿ ಎಡ ಎಂಜಿನ್‌ನಲ್ಲಿ ಬೆಂಕಿಯ ಲಕ್ಷಣಗಳನ್ನು ಪತ್ತೆಹಚ್ಚಿದ್ದರು. ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ