AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಬಿಸಿಯೂಟ ತಯಾರಕಾ ಮಹಿಳೆಯರಿಂದ ಪ್ರತಿಭಟನೆ; ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಯತ್ನ

ಕೊಪ್ಪಳ: ಬಿಸಿಯೂಟ ತಯಾರಕಾ ಮಹಿಳೆಯರಿಂದ ಪ್ರತಿಭಟನೆ; ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಯತ್ನ

ಶಿವಕುಮಾರ್ ಪತ್ತಾರ್
| Edited By: |

Updated on:Jul 10, 2026 | 7:56 PM

Share

ಕೊಪ್ಪಳದಲ್ಲಿ ಸಾವಿರಾರು ಬಿಸಿಯೂಟ ತಯಾರಕ ಮಹಿಳೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಮುಖ್ಯವಾಗಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್ ತಳ್ಳಿ ಆವರಣ ಪ್ರವೇಶಿಸಲು ಮುಂದಾದಾಗ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದರು.

ಕೊಪ್ಪಳ, ಜುಲೈ 10: ನಗರದಲ್ಲಿ ಸಾವಿರಾರು ಬಿಸಿಯೂಟ ತಯಾರಕಾ ಮಹಿಳೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ ಮಾಡಿದರು. ಸಿಐಟಿಯು ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದು, ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ವೇತನ ಹೆಚ್ಚಳ ಮಾಡಬೇಕು ಎಂಬುವುದು ಅವರ ಪ್ರಮುಖ ಆಗ್ರಹವಾಗಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಜಿಲ್ಲಾಡಳಿತ ಭವನದ ಆವರಣವನ್ನು ಪ್ರವೇಶಿಸಲು ಯತ್ನಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ, ಪ್ರತಿಭಟನೆಯ ಮುಂಚೂಣಿ ನಾಯಕರನ್ನು ವಶಕ್ಕೆ ಪಡೆದರು. ಸರ್ಕಾರವು ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 10, 2026 07:55 PM

Follow Us