ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

Updated on: Mar 23, 2026 | 8:16 PM

ಇನ್ನೂ ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದರ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್​ನಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇದು ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿಯ ಮತ್ತೊಂದು F-15E ಯುದ್ಧವಿಮಾನ ಪತನವಾಗುವುದನ್ನು ತೋರಿಸುತ್ತದೆ. ಇದು ಯಾವ ದಿನ ನಡೆದಿರುವ ದಾಳಿಯೆಂಬ ಮಾಹಿತಿಯಿಲ್ಲ. ಇರಾನ್‌ನ ರಾಜ್ಯ ಮಾಧ್ಯಮಗಳು ಭಾನುವಾರ ಹಾರ್ಮುಜ್ ದ್ವೀಪದ ಬಳಿ 'ಶತ್ರು'ದೇಶದ F-15 ಜೆಟ್ ಅನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡ ಹಿನ್ನೆಲೆಯಲ್ಲಿ ಇದೀಗ ವೈರಲ್ ಆದ ಈ ವಿಡಿಯೋ ಚರ್ಚೆಗೆ ಕಾರಣವಾಗಿದೆ.

ಕುವೈತ್, ಮಾರ್ಚ್ 23: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ಮುಂದುವರೆದಂತೆ ಇರಾನ್ (Iran War) ಕೂಡ ಗಲ್ಫ್ ದೇಶಗಳಲ್ಲಿನ ಅಮೆರಿಕದ ವಾಯುನೆಲೆಗಳ ಮೇಲಿನ ದಾಳಿಯನ್ನು ಮುಂದುವರೆಸಿದೆ. ಈ ಯುದ್ಧ ಆರಂಭವಾಗಿ 24 ದಿನಗಳಾಗಿವೆ. ಇನ್ನೂ ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದರ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಎಕ್ಸ್​ನಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ.

ಇದು ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿಯ ಮತ್ತೊಂದು F-15E ಯುದ್ಧವಿಮಾನ ಪತನವಾಗುವುದನ್ನು ತೋರಿಸುತ್ತದೆ. ಇದು ಯಾವ ದಿನ ನಡೆದಿರುವ ದಾಳಿಯೆಂಬ ಮಾಹಿತಿಯಿಲ್ಲ. ಇರಾನ್‌ನ ರಾಜ್ಯ ಮಾಧ್ಯಮಗಳು ಭಾನುವಾರ ಹಾರ್ಮುಜ್ ದ್ವೀಪದ ಬಳಿ ‘ಶತ್ರು’ದೇಶದ F-15 ಜೆಟ್ ಅನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡ ಹಿನ್ನೆಲೆಯಲ್ಲಿ ಇದೀಗ ವೈರಲ್ ಆದ ಈ ವಿಡಿಯೋ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More