ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

Updated on: Mar 25, 2026 | 6:17 PM

Milana Nagaraj: ‘ಲವ್ ಮಾಕ್ಟೆಲ್ 3’ ಸಿನಿಮಾ ಮೇಲೆ ಕತೆ ಕದ್ದ ಆರೋಪ ಬಂದಿದೆ. ಇದೀಗ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅದರಲ್ಲೂ ಮಿಲನಾ ನಾಗರಾಜ್ ಅವರು, ಕತೆ ಕದ್ದ ಆರೋಪದ ಬಗ್ಗೆ ಸಿಟ್ಟಿನಿಂದ ಉತ್ತರಿಸಿದ್ದಾರೆ. ಅಂಥಹಾ ಸಮಯ ಬಂದರೆ ಸಿನಿಮಾನೇ ಮಾಡಲ್ಲ ಎಂದಿದ್ದಾರೆ. ವಿಡಿಯೋ ನೋಡಿ...

‘ಲವ್ ಮಾಕ್ಟೆಲ್ 3’ (Love Mocktail 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕತೆಯನ್ನು ಕದಿಯಲಾಗಿದೆ. ನಾವು ಕೆಲ ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕತೆಯನ್ನು ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅದರಲ್ಲೂ ಮಿಲನಾ ನಾಗರಾಜ್ ಅವರು, ಕತೆ ಕದ್ದ ಆರೋಪದ ಬಗ್ಗೆ ಸಿಟ್ಟಿನಿಂದ ಉತ್ತರಿಸಿದ್ದಾರೆ. ಅಂಥಹಾ ಸಮಯ ಬಂದರೆ ಸಿನಿಮಾನೇ ಮಾಡಲ್ಲ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More