ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ

Edited By:

Updated on: Apr 09, 2026 | 9:51 AM

Vijayapura Earthquake: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇಂದು ಬೆಳಗ್ಗೆ 8:21ಕ್ಕೆ ಭೂಮಿ ಕಂಪಿಸಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲೂ ಕಂಪನದ ಅನುಭವವಾಗಿದ್ದು, ಯಾವುದೇ ಹಾನಿ ವರದಿಯಾಗಿಲ್ಲವಾದರೂ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಭೂಕಂಪನದ ಅನುಭವದ ವಿಡಿಯೋ ಇಲ್ಲಿದೆ ನೋಡಿ.

ವಿಜಯಪುರ, ಏಪ್ರಿಲ್ 9: ಜಿಲ್ಲೆಯ ತಿಕೋಟಾ ತಾಲುಕು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ 8:21ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More