ಕೋಟ್ಯಾಧಿಪತಿಯಾದ ಮಲೆ ಮಾದೇಶ್ವರ; ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ
ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ. 93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ.
ಚಾಮರಾಜನಗರ, ಮೇ.30: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾದೇಶ್ವರ ಮತ್ತೆ ಕೋಟ್ಯಾಧಿಪತಿಯಾಗಿದ್ದಾನೆ (Male Mahadeshwara Temple). ಮಾಯ್ಕಾರ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ.
93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ. ಸದ್ಯ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಸಹ ಹುಂಡಿಯಲ್ಲಿ ಸಿಕ್ಕಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos