ಕೋಟ್ಯಾಧಿಪತಿಯಾದ ಮಲೆ ಮಾದೇಶ್ವರ; ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ

Edited By: ಆಯೇಷಾ ಬಾನು

Updated on: May 30, 2024 | 9:55 AM

ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ. 93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ.

ಚಾಮರಾಜನಗರ, ಮೇ.30: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾದೇಶ್ವರ ಮತ್ತೆ ಕೋಟ್ಯಾಧಿಪತಿಯಾಗಿದ್ದಾನೆ (Male Mahadeshwara Temple). ಮಾಯ್ಕಾರ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ.

93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ. ಸದ್ಯ ಚಲಾವಣೆಯಲ್ಲಿ‌ ಇಲ್ಲದ 2000 ಮುಖಬೆಲೆಯ 25 ನೋಟುಗಳು‌ ಸಹ ಹುಂಡಿಯಲ್ಲಿ ‌ಸಿಕ್ಕಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More