ಲೋಕಾಯುಕ್ತ ಸರ್ಚ್ ವಾರಂಟ್ ಜಾರಿ ಮಾಡಿದ್ದನ್ನು ಮೊದಲು ಸಚಿವ ಭೈರತಿ ಸುರೇಶ್​ಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Nov 25, 2024 | 10:28 AM

ಭೈರತಿ ಸುರೇಶ್ ಮುಡಾಗೆ ಭೇಟಿ ನೀಡಿದ ಕೇವಲ ಎರಡು ದಿನಗಳಲ್ಲಿ ಲೋಕಾಯುಕ್ತ ಎಸ್​ಪಿ ಆಗಿದ್ದ ಸಜೀತ್ ವಿಎಸ್ ಅವರ ಟ್ರಾನ್ಸ್​ಫರ್ ಆಗಿದೆ, ಪ್ರಕರಣದಲ್ಲಿ ಅವರ ಪಾತ್ರ ಇರೋದು ಗೊತ್ತಾಗುತ್ತಿದೆ, ಹಾಗಾಗಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿರುವುದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಸ್ನೇಹಮಯಿ ಕೃಷ್ಣ ಹೇಳಿದರು.

ಮೈಸೂರು: ಮುಡಾ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಮ್ಮೆ ಹೇಳಿದರು. ನಗರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಕೃಷ್ಣ, ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರಂಟ್ ಜಾರಿಯಾಗಿದ್ದರೂ ಡಿವೈಎಸ್​ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ, ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವರಿಗೆ ವಿಷಯವನ್ನು ತಿಳಿಸಲಾಗಿದೆ, ಭೈರತಿ ಸುರೇಶ್ ಚಾಪರ್​ನಲ್ಲಿ ಬಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಕೃಷ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಪ್ರಕರಣ ನಿಭಾಯಿಸುವಲ್ಲಿ ಸಿಎಂ ಫೇಲ್​​, ಸಿದ್ದರಾಮಯ್ಯ ವಿರುದ್ಧ ಸಚಿವರು ಬೇಸರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.