AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ: ಅಧಿಕಾರಿಗಳಿಗೆ ಖಡಕ್​​ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ: ಅಧಿಕಾರಿಗಳಿಗೆ ಖಡಕ್​​ ಸೂಚನೆ

ಜಗದೀಶ ಬಿ.
| Edited By: |

Updated on: Sep 17, 2026 | 12:37 PM

Share

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಪ್ಯಾಕೇಜ್-11 ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ವೀಕ್ಷಿಸಿ ಪರಿಶೀಲಿಸಿದರು. ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮುಂದಿನ ಒಂದೂವರೆ ತಿಂಗಳೊಳಗೆ ಯೋಜನೆಯ ಎರಡನೇ ಹಂತ (Stage-2) ಪೂರ್ಣಗೊಳ್ಳಲಿದೆ.

ತುಮಕೂರು, ಸೆಪ್ಟೆಂಬರ್​​ 17: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ನೆಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಸಚಿವ ಎನ್​. ಚಲುವರಾಯಸ್ವಾಮಿ ಪರಿಶೀಲನೆ ನಡೆಸಿದ್ದಾರೆ. ಪ್ಯಾಕೇಜ್-11 ಕಾಮಗಾರಿ ವೀಕ್ಷಿಸಿದ ಸಚಿವರು, ಗ್ರಾವಿಟಿ ಕೆನಾಲ್ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ಸಚಿವರಿಗೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಾಥ್ ನೀಡಿದ್ದಾರೆ. ಸ್ಟೇಜ್-2 ಅರಣ್ಯ ಅನುಮತಿ ಕಡತಗಳು ಈಗಾಗಲೇ ದೆಹಲಿಗೆ ರವಾನೆಯಾಗಿದ್ದು, ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಸಿಗುವ ನಿರೀಕ್ಷೆಯಿದೆ. ಅ.15ರೊಳಗೆ ತುಮಕೂರು ಭಾಗದ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More