ಇಂದು ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ 117ನೇ ಜನ್ಮದಿನ; ಗದ್ದುಗೆ ದರ್ಶನ ಪಡೆದ ಡಾ.ಪರಮೇಶ್ವರ್

| Updated By: ಆಯೇಷಾ ಬಾನು

Updated on: Apr 01, 2024 | 9:03 AM

ಇಂದು ಲಿಂಗೈಕ್ಯ ಶಿವಕುಮಾರಸ್ವಾಮಿಗಳ 117ನೇ ಹುಟ್ಟುಹಬ್ಬ ಹಿನ್ನೆಲೆ ಬೆಳಗ್ಗೆಯಿಂದ ಗದ್ದುಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಶಿವಕುಮಾರ ಶ್ರೀಗಳ ಗದ್ದಿಗೆಗೆ ಅಭಿಷೇಕ ಮಾಡಲಾಗುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿವಿಧ ಮಠಾಧೀಶರು ಹಾಗೂ ಭಕ್ತರು ಭಾಗಿಯಾಗಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಗದ್ದುಗೆ ದರ್ಶನ ಪಡೆದರು.

ತುಮಕೂರು, ಏಪ್ರಿಲ್.01: ಇಂದು ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್ ಶ್ರೀಗಳ 117 ನೇ ಜಯಂತಿ. ಲೋಕಸಭಾ ಚುನಾವಣೆ ನೀತಿ ಸಂಹಿತ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಾಡಲಾಗುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿವಿಧ ಮಠಾಧೀಶರು ಹಾಗೂ ಭಕ್ತರು ಭಾಗಿಯಾಗಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಗದ್ದುಗೆ ದರ್ಶನ ಪಡೆದರು.

ಡಾ.ಶಿವಕುಮಾರ ಸ್ವಾಮೀಜಿ ಅವರ 117ನೇ ಜಯಂತಿ ನಡೀತಿದೆ. ಈ ಸಂದರ್ಭದಲ್ಲಿ ಭಕ್ತಿ ಪೂರ್ವಕವಾಗಿ ನಾನು ನಮನ ಸಲ್ಲಿಸಿದ್ದೇನೆ. ರಾಜ್ಯದ ಎಲ್ಲಾ ಭಾಗದ ಬಂದು ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಲಕ್ಷಾಂತರ ಮಕ್ಕಳು ಜೀವನ ಕಲ್ಪಿಸಿಕೊಂಡಿದ್ದಾರೆ. ಎಲ್ಲಾ ಕೊಡುಗೆಗಳನ್ನು ಗುರುತಿಸಿ ಶ್ರೀಗಳಿಗೆ ಭಾರತರತ್ನ ಕೊಡಬೇಕು. ಆದರೆ ಕೇಂದ್ರ ಸರ್ಕಾರ ಯಾಕೋ‌ ಏನೋ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿದರು.

ಇಂದು ಲಿಂಗೈಕ್ಯ ಶಿವಕುಮಾರಸ್ವಾಮಿಗಳ 117ನೇ ಹುಟ್ಟುಹಬ್ಬ ಹಿನ್ನೆಲೆ ಬೆಳಗ್ಗೆಯಿಂದ ಗದ್ದುಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಶಿವಕುಮಾರ ಶ್ರೀಗಳ ಗದ್ದಿಗೆಗೆ ಅಭಿಷೇಕ ಮಾಡಲಾಗುತ್ತಿದೆ. 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಸಿದ್ದಗಂಗಾ ಮಠಾಧ್ಯಕ್ಷ‌ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ವಿಶೇಷವಾಗಿ ಪತಂಜಲಿ ಖ್ಯಾತಿಯ ಬಾಬಾ ರಾಮದೇವ್, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಶ್ರಮದ ಕಲ್ಲಯ್ಯ ಅಜ್ಜರವರು ಸೇರಿದಂತೆ ಅನೇಕ ಪೂಜ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ 117ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಗುತ್ತೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ