ಸಂಪುಟ ಪುನಾರಚನೆ ಬಗ್ಗೆ ಸಚಿವ ಜಿ ಪರಮೇಶ್ವರ್ ಶಾಕಿಂಗ್ ಪ್ರತಿಕ್ರಿಯೆ! ಹೇಳಿದ್ದೇನು ನೋಡಿ

Updated on: Oct 09, 2025 | 11:11 AM

ಗೃಹ ಸಚಿವ ಪರಮೇಶ್ವರ್ ಅವರು ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸಂಪುಟ ವಿಸ್ತರಣೆ ಹೈಕಮಾಂಡ್‌ ಹಂತದಲ್ಲಿ ನಡೆಯುವ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ. ವಾಲ್ಮೀಕಿ ಸಮುದಾಯದವರನ್ನು ಸೇರಿಸಿಕೊಳ್ಳುವ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಮುಖ್ಯಮಂತ್ರಿಗಳ ಭೋಜನಕೂಟಕ್ಕೂ ಪುನಾರಚನೆಗೂ ಸಂಬಂಧವಿಲ್ಲ ಎಂದರು.

ಬೆಂಗಳೂರು, ಅಕ್ಟೋಬರ್ 9: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ ವರದಿಗಳ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸಚಿವ ಸಂಪುಟದ ವಿಸ್ತರಣೆ ಅಥವಾ ಪುನಾರಚನೆಯು ರಾಜ್ಯ ನಾಯಕರ ಹಂತದಲ್ಲಿ ನಡೆಯುವ ವಿಷಯವಲ್ಲ. ಇದು ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್‌ನ ನಿರ್ಧಾರವಾಗಿರುತ್ತದೆ. ಸಂಪುಟ ಪುನಾರಚನೆ ಕುರಿತಾದ ಸುದ್ದಿಗಳನ್ನು ಯಾರು ಹರಡುತ್ತಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ. ವಾಲ್ಮೀಕಿ ಸಮುದಾಯದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿಕೆ ನೀಡಿದ್ದರೂ, ಅದರ ಸಮಯವನ್ನು ನಿರ್ದಿಷ್ಟಪಡಿಸಿಲ್ಲ. ಹಾಗೆಂದು ಸಂಪುಟ ಪುನಾರಚನೆಗೆ ಹೈಕಮಾಂಡ್ ನಿರ್ಧಾರ ಕೈಗೊಂಡರೆ ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. ಅಲ್ಲದೆ, ಸಿಎಂ ಕರೆದಿರುವ ಔತಣಕೂಟಕ್ಕೂ ಸಂಪುಟ ಪುನಾರಚನೆ ವಿಚಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More