NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

Updated on: Dec 05, 2025 | 3:07 PM

ಎನ್.ಹೆಚ್.ಎಂ.ನಲ್ಲಿ 30,000 ಹುದ್ದೆಗಳ ಮರು ನೇಮಕಾತಿ ಕುರಿತು ಸ್ಪಷ್ಟನೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ಕೆಲವು ಪ್ರಪೋಸಲ್ಸ್ ಇವೆ. ಆದರೆ ಅಂತಿಮ ತೀರ್ಮಾನವಾಗಿಲ್ಲ. ಅಂತಿಮ ನಿರ್ಧಾರದ ನಂತರವಷ್ಟೇ ಇದರ ಬಗ್ಗೆ ಚರ್ಚಿಸಬಹುದು ಎಂದು ಹೇಳಿದ್ದಾರೆ. ಸಚಿವರು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ವತಿಯಿಂದ ಶ್ರೀಮತಿ ಪ್ರಮೋದಾದೇವಿ ಒಡೆಯರ್ ಪ್ರಾರಂಭಿಸಿರುವ ಸ್ವಸ್ಥ ಮೈಸೂರು ಅಭಿಯಾನಕ್ಕೆ ತಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಒಳ್ಳೆಯ ಆಹಾರ ಸೇವನೆ ಇಲ್ಲದಿರುವುದು, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯು ರೋಗಗಳಿಗೆ ಪ್ರಮುಖ ಕಾರಣ ಎಂದು ಹೇಳಿದ ಅವರು, ಗೃಹ ಆರೋಗ್ಯ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸುವ ಇಂಗಿತ ವ್ಯಕ್ತಪಡಿಸಿದರು.

ಮೈಸೂರು, ಡಿಸೆಂಬರ್ 05: ಎನ್.ಹೆಚ್.ಎಂ.ನಲ್ಲಿ 30,000 ಹುದ್ದೆಗಳ ಮರು ನೇಮಕಾತಿ ಕುರಿತು ಸ್ಪಷ್ಟನೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಈ ಕುರಿತು ಪ್ರಿನ್ಸಿಪಲ್ ಸೆಕ್ರೆಟರಿ ಯಾವುದೇ ಆದೇಶ ಹೊರಡಿಸಿಲ್ಲ. ಕೆಲವು ಪ್ರಪೋಸಲ್ಸ್ ಇವೆ. ಆದರೆ ಅಂತಿಮ ತೀರ್ಮಾನವಾಗಿಲ್ಲ. ಅಂತಿಮ ನಿರ್ಧಾರದ ನಂತರವಷ್ಟೇ ಇದರ ಬಗ್ಗೆ ಚರ್ಚಿಸಬಹುದು ಎಂದು ಹೇಳಿದ್ದಾರೆ. ಸಚಿವರು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ವತಿಯಿಂದ ಶ್ರೀಮತಿ ಪ್ರಮೋದಾದೇವಿ ಒಡೆಯರ್ ಪ್ರಾರಂಭಿಸಿರುವ ಸ್ವಸ್ಥ ಮೈಸೂರು ಅಭಿಯಾನಕ್ಕೆ ತಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಒಳ್ಳೆಯ ಆಹಾರ ಸೇವನೆ ಇಲ್ಲದಿರುವುದು, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯು ರೋಗಗಳಿಗೆ ಪ್ರಮುಖ ಕಾರಣ ಎಂದು ಹೇಳಿದ ಅವರು, ಗೃಹ ಆರೋಗ್ಯ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸುವ ಇಂಗಿತ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.