ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಸಚಿವ ಮಹದೇವಪ್ಪ

Edited By:

Updated on: Apr 18, 2026 | 4:47 PM

ಸಚಿವ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು "ಟಗರು" ಎಂದು ಬಣ್ಣಿಸಿ, ಅವರು ಎಂದಿಗೂ ದುರ್ಬಲರಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಸಚಿವ ಮಹದೇವಪ್ಪ ಮಾತನಾಡಿ, ಸಿದ್ದರಾಮಯ್ಯ ಅವ್ರು ಎಂದಿಗೂ ದುರ್ಬಲ ಆಗಿಲ್ಲ. ಅವರು ಟಗರು ಇದ್ದಂತೆ. ಈಗ ಗುರಾಯಿಸುತ್ತಿದೆ. ಯಾವಾಗ ಗುದ್ದಬೇಕೋ ಗುದ್ದುತ್ತದೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ.

ಬೆಂಗಳೂರು, ಏಪ್ರಿಲ್​ 18: ಸಿಎಂ ಯಾವಾಗ ದುರ್ಬಲ ಆಗಿದ್ದಾರೆ. ಯಾವಾಗಲೂ ಗಟ್ಟಿನೇ ಅವರು. ಟಗರು ಟಗರೆ ಅಲ್ವಾ? ಯಾವಾಗ ಗುದ್ದಬೇಕೋ ಗುದ್ದುತ್ತದೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಸಿಎಂ ಅಸಹಾಯಕರು ಎಂಬ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು, ದಲಿತರು ಮತ್ತು ಹಿಂದುಳಿದ ವರ್ಗಗಳು ಬೆನ್ನೆಲುಬಾಗಿದ್ದಾರೆ. ರಾಜಣ್ಣ ಅವರಿಗೆ ಸಿಎಂ ಮೇಲೆ‌ ಪ್ರೀತಿ ಇದೆಯಲ್ಲ, ಹಾಗಾಗಿ ಅವರು ಜೋರಾಗಿ ಮಾತಾಡಬೇಕು ಅಂತಾರೆ. ಟಗರು ಸುಮ್ ಸುಮ್ಮನೆ ಗುದ್ದ ಬೇಕು ಅಂತಿಲ್ವಲ್ಲ. ಈಗ ಗುರಾಯಿಸುತ್ತಿದೆ. ಯಾವ ಕಾಲಕ್ಕೆ ಏನು ಮಾಡಬೇಕೋ ಮಾಡುತ್ತದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More