AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!

ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!

ಪ್ರಶಾಂತ್​ ಬಿ.
| Edited By: |

Updated on: Oct 11, 2026 | 12:22 PM

Share

ಮಾಗಡಿ ಸಚಿವ ಹೆಚ್.ಸಿ.ಬಾಲಕೃಷ್ಣ ದಿಢೀರ್ ಭೇಟಿ ನೀಡಿ ತರಕಾರಿ ಮಾರುಕಟ್ಟೆಯ ಕಸ ವಿಲೇವಾರಿ ವೈಫಲ್ಯ ಕಂಡು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಗಡಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಮತ್ತು ಆರೋಗ್ಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವರು, ವ್ಯಾಪಾರಿಗಳ ಸಹಯೋಗದೊಂದಿಗೆ ಮಾರುಕಟ್ಟೆಯನ್ನು ಮರುಸಂಘಟಿಸಲು ಮತ್ತು ತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸಲು ಸೂಚನೆ ನೀಡಿದರು.

ರಾಮನಗರ, ಅಕ್ಟೋಬರ್ 11: ಮಾಗಡಿ ಪುರಸಭೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಹೆಚ್.ಸಿ.ಬಾಲಕೃಷ್ಣ ದಿಢೀರ್ ಭೇಟಿ ನೀಡಿ ಮಾಗಡಿ ತರಕಾರಿ ಮಾರುಕಟ್ಟೆಯನ್ನು ಪರಿಶೀಲಿಸಿದರು. ಈ ವೇಳೆ ಮಾರುಕಟ್ಟೆಯಲ್ಲಿ ಕಸದ ರಾಶಿ ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಳೆಯ ಮತ್ತು ಹೊಸ ಕಸದ ವಿಲೇವಾರಿಯಲ್ಲಿನ ವೈಫಲ್ಯವನ್ನು ಗಮನಿಸಿ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಮತ್ತು ಆರೋಗ್ಯ ಅಧಿಕಾರಿ ಶಿವ ಬಾಬಾ ಅವರಿಗೆ ತರಾಟೆ ತೆಗೆದುಕೊಂಡರು.

ಸಚಿವರು ತಕ್ಷಣವೇ ಕಸ ವಿಲೇವಾರಿಗೆ ಸೂಚಿಸಿದ್ದು, ಅಧಿಕಾರಿಗಳು ಬೆಳಗ್ಗೆಯೇ ಸ್ಥಳದಲ್ಲಿ ಹಾಜರಿರಬೇಕು ಎಂದು ನಿರ್ದೇಶನ ನೀಡಿದರು. ಮಾರುಕಟ್ಟೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು. ತರಕಾರಿ, ಹೂವು ಮತ್ತು ಹಣ್ಣು ಮಾರಾಟಗಾರರಿಗೆ ಪ್ರತ್ಯೇಕ ಸ್ಥಳಗಳನ್ನು ನಿಗದಿಪಡಿಸುವ ಮೂಲಕ ಮಾರುಕಟ್ಟೆಯನ್ನು ವ್ಯವಸ್ಥಿತಗೊಳಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಈ ಕ್ರಮಗಳು ಮಾಗಡಿ ಮಾರುಕಟ್ಟೆಯ ನೈರ್ಮಲ್ಯ ಮತ್ತು ವ್ಯವಸ್ಥಿತತೆಗೆ ಸಹಾಯಕವಾಗಲಿವೆ ಎಂದು ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More