13 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಲಕ್ಷ್ಮೀ ಹೆಬ್ಬಾಳ್ಕರ್​

| Updated By: ವಿವೇಕ ಬಿರಾದಾರ

Updated on: Jan 26, 2025 | 9:42 AM

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜನವರಿ 14 ರಂದು ಸಂಭವಿಸಿದ್ದ ಕಾರು ಅಪಘಾತದಿಂದ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 13 ದಿನಗಳ ಚಿಕಿತ್ಸೆಯ ನಂತರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುಮೂಳೆ ಮುರಿತ ಮತ್ತು ಕತ್ತಿಗೆ ಗಾಯಗಳಿಂದ ಬಳಲುತ್ತಿದ್ದ ಅವರು, ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರು ತಮ್ಮನ್ನು ಆರೈಕೆ ಮಾಡಿದವರಿಗೆ ಮತ್ತು ತಮ್ಮ ಬೆಂಬಲಿಗರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದು ತಿಳಿಸಿದರು.