ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಗುಣಗಾನ ಮಾಡಿದ ಸಚಿವ ಕೆಸಿ ನಾರಾಯಣಗೌಡ ವರಿಷ್ಠರ ಕೆಂಗಣ್ಣಿಗೆ ಗುರಿಯಾಗೋದು ನಿಶ್ಚಿತ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 12:06 PM

ಕೆಆರ್ ಪೇಟೆ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವರು ಸಿದ್ದರಾಮಯ್ಯನವರ ಗುಣಗಾನ ಮಾಡಿದರು.

ಮಂಡ್ಯ:  ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿರುವ ಕೆ ಸಿ ನಾರಾಯಣಗೌಡರಿಗೆ (KC Narayanagowda) ಶೋಕಾಸ್ ನೊಟೀಸು (show cause) ನೀಡೋದು ಪಕ್ಕಾ ಅನಿಸುತ್ತಿದೆ ಮಾರಾಯ್ರೇ. ಯಾಕೆ ಅಂತ ಈ ವಿಡಿಯೋ ವೀಕ್ಷಿಸಿದರೆ ನಿಮಗೆ ಗೊತ್ತಾಗುತ್ತದೆ. ಆಡಳಿತ ಪಕ್ಷದ ಹಲವಾರು ಸಚಿವರು ಮತ್ತು ಶಾಸಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಬಹಳ ಗೌರವ ಹೊದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಚುನಾವಣೆ ನೆತ್ತಿ ಮೇಲಿರುವಾಗ ಅವರನ್ನು ಹಾಡಿ ಹೊಗಳುವ ಮೂಲಕ ನಾರಾಯಣಗೌಡರು ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿರುವುದಂತೂ ಸತ್ಯ. ಜಿಲ್ಲೆಯ ಕೆಆರ್ ಪೇಟೆ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವರು ಸಿದ್ದರಾಮಯ್ಯನವರ ಗುಣಗಾನ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.