ಕೋಟ್ಯಾಧಿಪತಿಗಳ ಬಳಿ ಬಿಪಿಎಲ್ ಕಾರ್ಡ್ ಪತ್ತೆ, ಅಕ್ರಮವಾಗಿ ಕಾರ್ಡ್ ಪಡೆದವರಿಗೆ ಶಾಕ್

Updated on: Sep 16, 2025 | 4:42 PM

ಕೋಟಿ, ಕೋಟಿ ಆಸ್ತಿ ಇರುವವರ ಬಳಿ ಕೂಡ ಬಿಪಿಎಲ್​ ಕಾರ್ಡ್ (BPL Card)​​ ಇರೋದು ಪತ್ತೆಯಾಗಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳ ಮೇಲೆ ರಾಜ್ಯ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಆಹಾರ ಇಲಾಖೆಯಿಂದ ಈಗಾಗಲೇ ವಿಶೇಷ ಕಾರ್ಯಾಚರಣೆಯಲ್ಲಿ‌ ಬಹಿರಂಗವಾಗಿದೆ.ಈ ಹಿನ್ನೆಲೆ ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ಅಕ್ರಮವಾಗಿ ಪಡೆದಿರುವ ಬಿಎಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. 12,68,097 ಅನುಮಾನಸ್ಪಾದ ರೇಷನ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

ಬೆಂಗಳೂರು (ಸೆಪ್ಟೆಂಬರ್ 16): ಕೋಟಿ, ಕೋಟಿ ಆಸ್ತಿ ಇರುವವರ ಬಳಿ ಕೂಡ ಬಿಪಿಎಲ್​ ಕಾರ್ಡ್ (BPL Card)​​ ಇರೋದು ಪತ್ತೆಯಾಗಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳ ಮೇಲೆ ರಾಜ್ಯ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಆಹಾರ ಇಲಾಖೆಯಿಂದ ಈಗಾಗಲೇ ವಿಶೇಷ ಕಾರ್ಯಾಚರಣೆಯಲ್ಲಿ‌ ಬಹಿರಂಗವಾಗಿದೆ.ಈ ಹಿನ್ನೆಲೆ ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ಅಕ್ರಮವಾಗಿ ಪಡೆದಿರುವ ಬಿಎಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. 12,68,097 ಅನುಮಾನಸ್ಪಾದ ರೇಷನ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ. ಈ ಬಗ್ಗೆ ಆಹಾರ ಇಲಾಖೆಯಿಂದ ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಇನ್ನು ಈ ಬಗ್ಗೆ ಸಚಿವ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಬಿಪಿಎಲ್ ಕಾರ್ಡ್ ಬಗ್ಗೆ ಸೆಕ್ರೆಟರಿ ಮೀಟಿಂಗ್ ಮಾಡುತ್ತಿದ್ದೇನೆ. ನಾಳೆ ಬೆಳಗ್ಗೆ ಸುದ್ದಿಗೋಷ್ಠಿ ಮಾಡಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More