AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ರಮೇಶ್ ಬಿ. ಜವಳಗೇರಾ
|

Updated on: Mar 10, 2026 | 8:09 PM

Share

ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಇದರಿಂದ ಸ್ವಪಕ್ಷದಲ್ಲೇ ಹೊತ್ತಿಕೊಂಡ ಈ ಭಿನ್ನಾಭಿಪ್ರಾಯದ ಕಿಡಿ, ಪರಿಸ್ಥಿತಿ ಕೈಮೀರಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ದಲಿತ ಸಚಿವರು ಮಹತ್ವದ ಸಭೆ ನಡೆಸಿದ್ದು, ಗೊಂದಲ ಪರಿಹಾರ ಕುರಿತು ಸಿದ್ದರಾಮಯ್ಯ ಜೊತೆಗೆ ಚರ್ಚಿಸಿದ್ದಾರೆ.

ಬೆಂಗಳೂರು, (ಮಾರ್ಚ್ 10): ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಇದರಿಂದ ಸ್ವಪಕ್ಷದಲ್ಲೇ ಹೊತ್ತಿಕೊಂಡ ಈ ಭಿನ್ನಾಭಿಪ್ರಾಯದ ಕಿಡಿ, ಪರಿಸ್ಥಿತಿ ಕೈಮೀರಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ದಲಿತ ಸಚಿವರು ಮಹತ್ವದ ಸಭೆ ನಡೆಸಿದ್ದು, ಗೊಂದಲ ಪರಿಹಾರ ಕುರಿತು ಸಿದ್ದರಾಮಯ್ಯ ಜೊತೆಗೆ ಚರ್ಚಿಸಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಮುನಿಯಪ್ಪ, ಒಳಮೀಸಲಾತಿ ಆಧರಿಸಿ ನೇಮಕಾತಿ ಮಾಡಿಕೊಳ್ಳುವುದಾಗಿ ಸಿಎಂ ಕೂಡ ಭರವಸೆ ನೀಡಿದ್ದಾರೆ. ಮಾರ್ಚ್ 27ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನವಾಗುತ್ತೆ. ಬಲ ಸಮುದಾಯ ‌ನಾಯಕರು ಒಳಮೀಸಲಾತಿಗೆ ಒಪ್ಪಿಕೊಂಡಿದ್ದಾರೆ. ಎಡ, ಬಲ ಸಮುದಾಯಗಳಿಗೆ ಸರಿಸಮವಾಗಿ ಒಳಮೀಸಲಾತಿ ಹಂಚಿಕೆ ಮಾಡಲಾಗುತ್ತೆ. ಮಾ.27ರವರೆಗೆ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟಣೆ ಆಗಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us