ಕೋಲಾರ, (ಡಿಸೆಂಬರ್ 06) : ಮುಖ್ಯಮಂತ್ರಿ ಕುರ್ಚಿ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದ ಮತ್ತೆ ಚರ್ಚೆಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಮುಖಂಡರೊಬ್ಬರ ಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದು ಸರಿಯಾಗಿದೆ. ನನ್ನ ಬೇರೇನು ಕೇಳಬೇಡಿ ಎಂದು ಹೇಳುವ ಮೂಲಕ ಸಚಿವ ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
Published On - 10:54 pm, Fri, 6 December 24