ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಸಂಚಲನ ಮೂಡಿಸಿದೆ.
ನವದೆಹಲಿ, (ಜನವರಿ 16): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಸಂಚಲನ ಮೂಡಿಸಿದೆ.
ನವದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿಯವರನ್ನ ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಡಿಕೆ ಶಿವಕುಮಾರ್ ಸಾಕಷ್ಟು ಬಾರಿ ಯತ್ನಿಸಿ ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಆದ್ರೆ, ಇದೀಗ ಏಕಾಏಕಿ ರಾಹುಲ್, ಜಾರ್ಜ್ ಭೇಟಿಗೆ ಸಮಯ ಕೊಟ್ಟಿರುವುದು ಕಾಂಗ್ರೆಸ್‌ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆಯೂ ಸಹ ಇದೇ ನಾಯಕತ್ವ ಬದಲಾವಣೆ ಸಂಬಂಧ ಬಣ ಬಡಿದಾಟ ತೀವ್ರ ಸ್ವರೂಪಕ್ಕೆ ಹೋಗಿದ್ದಾಗ ಜಾರ್ಜ್, ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯನ ಜತೆ ಮಾತುಕತೆ ನಡೆಸಿದ ಬಳಿಕ ಡಿಕೆಶಿಯನ್ನು ಭೇಟಿ ಮಾಡಿದ್ದರು. ಈ ಮೂಲಕ ಸದ್ಯಕ್ಕೆ ಸೈಲೆಂಟ್ ಇರಿ ಎಂದು ಮನವೊಲಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತದೇ ಜಾರ್ಜ್ ದಿಢೀರ್ ರಾಹುಲ್ ಗಾಂಧಿ ಭೇಟಿ ಮಾಡಿ ಬಂದಿರುವುದು ಸಾಕಷ್ಟು ಕುತೂಹಲಕ್ಕೆ ಕಾರತಣವಾಗಿದೆ.
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!

