AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಕೃಷ್ಣ ಭೈರೇಗೌಡರ ಶ್ವಾನ ಪ್ರೇಮಕ್ಕೆ ಜನರು ಫಿದಾ; ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ, ಇಲ್ಲಿದೆ ವಿಡಿಯೋ

ಸಚಿವ ಕೃಷ್ಣ ಭೈರೇಗೌಡರ ಶ್ವಾನ ಪ್ರೇಮಕ್ಕೆ ಜನರು ಫಿದಾ; ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ, ಇಲ್ಲಿದೆ ವಿಡಿಯೋ

ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 05, 2023 | 6:02 PM

Share

ಕೋಲಾರ ಫಾರ್ಮ್ ಹೌಸ್​ನಲ್ಲಿ ಸಮಯ ಕಳೆಯುತ್ತಿರುವ ಸಚಿವ ಕೃಷ್ಣ ಭೈರೇಗೌಡ ಅವರು, ನೆಲದ ಮೇಲೆ ಕುಳಿತುಕೊಂಡು ಶ್ವಾನಗಳನ್ನು ಮುದ್ದಾಡುತ್ತಿರುವ ವೀಡಿಯೋ ವೈರಲ್ ಆಗಿದೆ. ಸಚಿವರ ಶ್ವಾನ ಪ್ರೇಮಕ್ಕೆ ನೋಡುಗರು ಫಿಧಾ ಆಗಿದ್ದಾರೆ. ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಅವರ ಸರಳತೆ ಮಾತ್ರ ಇನ್ನೂ ಹಾಗೆಯೇ ಇದೆ ಎನ್ನುತ್ತಿದ್ದಾರೆ.

ಬೆಂಗಳೂರು, ಸೆ.05: ಕಳೆದ ವಾರ ತಮ್ಮ ಲಗೇಜ್ ತಾವೇ ಹಿಡಿದುಕೊಂಡು ಓಡಾಡಿ ಗಮನ ಸೆಳೆದಿದ್ದ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು, ಇದೀಗ ಮತ್ತೊಮ್ಮೆ ತಮ್ಮ ಸರಳತೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಹೌದು, ತಮ್ಮ ಕೋಲಾರ (Kolar) ಫಾರ್ಮ್ ಹೌಸ್​ನಲ್ಲಿ ಸಮಯ ಕಳೆಯುತ್ತಿರುವ ಅವರು, ನೆಲದ ಮೇಲೆ ಕುಳಿತುಕೊಂಡು ಶ್ವಾನಗಳನ್ನು ಮುದ್ದಾಡುತ್ತಿರುವ ವೀಡಿಯೋ ವೈರಲ್ ಆಗಿದೆ. ಸಚಿವರ ಶ್ವಾನ ಪ್ರೇಮಕ್ಕೆ ನೋಡುಗರು ಫಿಧಾ ಆಗಿದ್ದಾರೆ. ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಅವರ ಸರಳತೆ ಮಾತ್ರ ಇನ್ನೂ ಹಾಗೆಯೇ ಇದೆ. ಈ ಮೂಲಕ ಸಚಿವ ಕೃಷ್ಣ ಭೈರೇಗೌಡ ಅವರು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More