ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ರೂ ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿವಿಧ ಇಲಾಖೆಯ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.ಇನ್ನು ಇಂದು (ಜೂನ್ 22) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಸಭೆ ನಡೆಸಿದ್ದು, ವೈಟ್ ಟ್ಯಾಪಿಂಗ್, ಫ್ಲೈಓವರ್ ಸೇರಿದಂತೆ ಇತರೆ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲಿವೇಟೆಡ್ ಕಾರಿಡಾರ್ ಆಗುತ್ತೆ, ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ದರೂ ವೈಟ್ ಟ್ಯಾಪಿಂಗ್ ಮಾಡೋದೇಕೆ? ಆಮೇಲೆ ಫ್ಲೈಓವರ್ ಕಾರಣಕ್ಕೆ ಮತ್ತೆ ವೈಟ್ ಟ್ಯಾಪಿಂಗ್ ಕಿತ್ತಾಕೋದು ಯಾರಿಗೆ ಬಿಲ್ ಮಾಡೋಕೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬೆಂಗಳೂರು, (ಜೂನ್ 22): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (Minister krishna byre gowda) ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿವಿಧ ಇಲಾಖೆಯ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮೊನ್ನೇ ಅಷ್ಟೇ ತಮ್ಮ ಮೊದಲ ಸಭೆಯಲ್ಲೇ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಪ್ರಸ್ತಾಪಿಸಿ ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಅಲ್ಲದೇ ಡಾಂಬರೀಕರಣದಲ್ಲಿ ಕಳ್ಳಾಟವಾಡಿದ್ದ ಓರ್ವ ಇಂಜಿನಿಯರ್ನನ್ನು ಸಹ ಸಸ್ಪೆಂಡ್ ಮಾಡಿದ್ದರು.
ಇನ್ನು ಇಂದು (ಜೂನ್ 22) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಸಭೆ ನಡೆಸಿದ್ದು, ವೈಟ್ ಟ್ಯಾಪಿಂಗ್, ಫ್ಲೈಓವರ್ ಸೇರಿದಂತೆ ಇತರೆ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲಿವೇಟೆಡ್ ಕಾರಿಡಾರ್ ಆಗುತ್ತೆ, ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ದರೂ ವೈಟ್ ಟ್ಯಾಪಿಂಗ್ ಮಾಡೋದೇಕೆ? ಆಮೇಲೆ ಫ್ಲೈಓವರ್ ಕಾರಣಕ್ಕೆ ಮತ್ತೆ ವೈಟ್ ಟ್ಯಾಪಿಂಗ್ ಕಿತ್ತಾಕೋದು ಯಾರಿಗೆ ಬಿಲ್ ಮಾಡೋಕೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

