ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ರೂ ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

Edited By:

Updated on: Jun 22, 2026 | 4:46 PM

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿವಿಧ ಇಲಾಖೆಯ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ವೇಳೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.ಇನ್ನು ಇಂದು (ಜೂನ್ 22) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಸಭೆ ನಡೆಸಿದ್ದು, ವೈಟ್ ಟ್ಯಾಪಿಂಗ್, ಫ್ಲೈಓವರ್ ಸೇರಿದಂತೆ ಇತರೆ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲಿವೇಟೆಡ್ ಕಾರಿಡಾರ್ ಆಗುತ್ತೆ, ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ದರೂ ವೈಟ್ ಟ್ಯಾಪಿಂಗ್ ಮಾಡೋದೇಕೆ? ಆಮೇಲೆ ಫ್ಲೈಓವರ್ ಕಾರಣಕ್ಕೆ ಮತ್ತೆ ವೈಟ್ ಟ್ಯಾಪಿಂಗ್ ಕಿತ್ತಾಕೋದು ಯಾರಿಗೆ ಬಿಲ್ ಮಾಡೋಕೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಜೂನ್ 22): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ  (Minister krishna byre gowda) ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿವಿಧ ಇಲಾಖೆಯ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ವೇಳೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮೊನ್ನೇ ಅಷ್ಟೇ ತಮ್ಮ ಮೊದಲ ಸಭೆಯಲ್ಲೇ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಪ್ರಸ್ತಾಪಿಸಿ ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಅಲ್ಲದೇ ಡಾಂಬರೀಕರಣದಲ್ಲಿ ಕಳ್ಳಾಟವಾಡಿದ್ದ ಓರ್ವ ಇಂಜಿನಿಯರ್​​​​ನನ್ನು ಸಹ ಸಸ್ಪೆಂಡ್ ಮಾಡಿದ್ದರು.

ಇನ್ನು ಇಂದು (ಜೂನ್ 22) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಸಭೆ ನಡೆಸಿದ್ದು, ವೈಟ್ ಟ್ಯಾಪಿಂಗ್, ಫ್ಲೈಓವರ್ ಸೇರಿದಂತೆ ಇತರೆ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲಿವೇಟೆಡ್ ಕಾರಿಡಾರ್ ಆಗುತ್ತೆ, ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ದರೂ ವೈಟ್ ಟ್ಯಾಪಿಂಗ್ ಮಾಡೋದೇಕೆ? ಆಮೇಲೆ ಫ್ಲೈಓವರ್ ಕಾರಣಕ್ಕೆ ಮತ್ತೆ ವೈಟ್ ಟ್ಯಾಪಿಂಗ್ ಕಿತ್ತಾಕೋದು ಯಾರಿಗೆ ಬಿಲ್ ಮಾಡೋಕೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More