Karwar: ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೃಷ್ಣ ಭೈರೇಗೌಡ

Updated on: Jul 08, 2023 | 7:09 PM

ಹಣ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ ಎಂದು ಹೇಳಿದ ಸಚಿವರು ಮುಂಬರುವ ದಿನಗಳಲ್ಲಿ ಯಾವುದಾದರೂ ಸಹಾಯ ಬೇಕಿದ್ದರೆ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದರು.

ಕಾರವಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಹ (Krishna Byre Gowda) ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಮತ್ತೊಬ್ಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಹಾಗೆ ಮಳೆಯಿಂದ ಹಾನಿಯುಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲ ಕುಮಟಾ ತಾಲ್ಲೂಕಿನ ಬೆಟ್ಕುಳ್ಳಿ ಗ್ರಾಮದಲ್ಲಿ ಇಬ್ಬರು ಮಳೆನೀರಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸತೀಶ್ ಪಾಂಡುರಂಗ (Satish Pandurang) (40) ಮತ್ತು ಉಲ್ಲಾಸ್ ಗಾವಡಿ (Ullhas Gavadi) (50) ಎಂದು ಗುರುತಿಸಲಾಗಿದೆ. ಗ್ರಾಮಕ್ಕೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವ ಮೃತರ ಮನೆಗಳಿಗೆ ಹೋಗಿ ದುಃಖತಪ್ತ್ತ ಕುಟುಂಬಗಳನ್ನು ಸಂತೈಸಿ, ತಲಾ 5 ಲಕ್ಷ ರೂ. ಗಳ ಪರಿಹಾರವನ್ನು ನೀಡಿದರು. ಹಣ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ ಎಂದು ಹೇಳಿದ ಸಚಿವರು ಮುಂಬರುವ ದಿನಗಳಲ್ಲಿ ಯಾವುದಾದರೂ ಸಹಾಯ ಬೇಕಿದ್ದರೆ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More