ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಸಮಾರಂಭದಲ್ಲಿ ಸಚಿವರ ಭಾಷಣಕ್ಕೆ ಕೋಕ್: ಕೃಷ್ಣ ಭೈರೇಗೌಡ ಅಸಮಾಧಾನ
ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಸಮಾರಂಭದ ಅಂತಿಮ ಪಟ್ಟಿಯಲ್ಲಿ ತಮ್ಮ ಭಾಷಣಕ್ಕೆ ಅವಕಾಶ ನೀಡದಿರುವುದಕ್ಕೆ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತ ಪಾಲು ಕೇಳಿದ್ದಕ್ಕೆ ಈ ಶಿಕ್ಷೆ ಸಿಕ್ಕಿದೆ ಎಂದು ಅವರು ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ಮಾರಂಭದಲ್ಲಿ ನೀವು ನನ್ನ ಭಾಷಣ ಕಟ್ ಮಾಡಬಹುದು. ಆದರೆ ಬೆಂಗಳೂರು ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಆಗಲ್ಲ ಎಂದೂ ಕೌಂಟರ್ ಕೊಟ್ಟಿದ್ದಾರೆ.
ಬೆಂಗಳೂರು, ನವೆಂಬರ್ 12: ಪ್ರಧಾನಿ ಮೋದಿ ನಾಳೆ (ನವೆಂಬರ್ 13) ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಲಿದ್ದು, ಸಮಾರಂಭದಲ್ಲಿ ಬೆಂಗಳೂರು ಅಭಿವೃದ್ಧಿ ಮಂತ್ರಿಗೆ ಮಾತಾಡಲು ಅವಕಾಶವಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ ಇದು ಎಂದು ಎಕ್ಸ್ ಖಾತೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಪೋಸ್ಟ್ ಮಾಡಿದ್ದಾರೆ. ಮೆಟ್ರೋ ಉದ್ಘಾಟನಾ ಸಮಾರಂಭದ ಡ್ರಾಫ್ಟ್ನಲ್ಲಿ ಅವಕಾಶ ನಿಗದಿಯಾಗಿತ್ತು. ಆದರೆ ನಿನ್ನೆ ರಾತ್ರಿ ಬಂದ ಅಂತಿಮಪಟ್ಟಿಯಲ್ಲಿ ನನ್ನ ಮಾತನ್ನು ಕಟ್ ಮಾಡಲಾಗಿದೆ. ನಮ್ಮ ಮೆಟ್ರೋ ಯೋಜನೆಗೆ ಬಹುತೇಕ ಬಂಡವಾಳ ನಮ್ಮದೇ ಆಗಿದ್ದು, ಕರ್ನಾಟಕ ರಾಜ್ಯಕ್ಕೆ ನ್ಯಾಯಯುತವಾದ ಪಾಲು ಕೇಳಿದರೆ ಈ ರೀತಿ ಶಿಕ್ಷೆ ಸಿಕ್ಕಿದೆ. ಪರವಾಗಿಲ್ಲ, ಸಮಾರಂಭದಲ್ಲಿ ನೀವು ನನ್ನ ಭಾಷಣ ಕಟ್ ಮಾಡಬಹುದು. ಆದರೆ ಬೆಂಗಳೂರು ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಆಗಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇನೆಂದು ಕೃಷ್ಣ ಭೈರೇಗೌಡ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

